Dailyhunt Logo
  • Light mode
    Follow system
    Dark mode
    • Play Story
    • App Story
ಕಾಮನ್ವೆಲ್ತ್ ಕ್ರೀಡಾಕೂಟ ಪದಕ ವಿಜೇತರಿಗೆ ರಾಷ್ಟ್ರಪತಿ ಸೇರಿ ಗಣ್ಯರಿಂದ ಅಭಿನಂದನೆ

ಕಾಮನ್ವೆಲ್ತ್ ಕ್ರೀಡಾಕೂಟ ಪದಕ ವಿಜೇತರಿಗೆ ರಾಷ್ಟ್ರಪತಿ ಸೇರಿ ಗಣ್ಯರಿಂದ ಅಭಿನಂದನೆ

ನವದೆಹಲಿ, ಜುಲೈ 31(ಹಿ.ಸ.):

ಆಯಂಕರ್:

ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟ-2026ರಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಿಳೆಯರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೀಮಾ ಕಾಲಿರಾಮನಾ ಹಾಗೂ ಪುರುಷರ 110 ಕೆ.ಜಿ. ಮೇಲ್ಪಟ್ಟ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಜಯಿಸಿದ ಲವ್‌ಪ್ರೀತ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಅವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತೀಯ ಕ್ರೀಡಾಪಟುಗಳ ಸಾಧನೆ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದು, ಯುವ ಪ್ರತಿಭೆಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪದಕ ವಿಜೇತರ ಸಾಧನೆ ಅವರ ಕಠಿಣ ಪರಿಶ್ರಮ, ಶಕ್ತಿ ಮತ್ತು ಅಚಲ ಸಂಕಲ್ಪದ ಫಲವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಕೂಡ ಭಾರತೀಯ ಕ್ರೀಡಾಪಟುಗಳ ಸಾಧನೆಯನ್ನು ಅಭಿನಂದಿಸಿ, ಅವರ ಏಕಾಗ್ರತೆ ಮತ್ತು ಸಮರ್ಪಣೆಯ ಫಲವಾಗಿ ಈ ಗೆಲುವು ದೊರೆತಿದೆ ಎಂದು ತಿಳಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada