Dailyhunt
ಕೇಂದ್ರದ ವಿರುದ್ದ ಕಾಂಗ್ರೆಸ್ ಸಮರ ; ಜೂ. 24 ರಂದು ಸಭೆ

ಕೇಂದ್ರದ ವಿರುದ್ದ ಕಾಂಗ್ರೆಸ್ ಸಮರ ; ಜೂ. 24 ರಂದು ಸಭೆ

ನವದೆಹಲಿ, ಜೂ.21: ಇಂಧನ ದರ ಏರಿಕೆ ಇನ್ನಿತರ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರದ ವಿರುದ್ದ ಸಮರ ಸಾರಲು ಪ್ರತಿ ಪಕ್ಷ ಕಾಂಗ್ರೆಸ್ ಮುಂದಾಗಿದೆ.‌

ಈ ಕುರಿತು ಚರ್ಚೆ ನಡೆಸಲು ಇದೇ 24ರಂದು ಎಲ್ಲ ಪ್ರಧಾನ ಕಾರ್ಯದರ್ಶಿಗಳ ಮತ್ತು ರಾಜ್ಯ ಉಸ್ತುವಾರಿಗಳ ಸಭೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಕರೆದಿದ್ದಾರೆ.

ಜುಲೈನಲ್ಲಿ ಸಂಸತ್ ಅಧಿವೇಶನ ಪ್ರಾರಂಭವಾಗು ತ್ತಿರುವ ಬೆನ್ನಲ್ಲೇ ಈ ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ.

24ರಂದು ನಡೆಯಲಿರುವ ವರ್ಚುವಲ್ ಸಭೆಯಲ್ಲಿ ಪ್ರಸ್ತುತ ದೇಶದಲ್ಲಿ ಕೊರೊನಾ ಹಾಗೂ ರಾಜಕೀಯ ಪರಿಸ್ಥಿತಿ ಕುರಿತು ನಾಯಕರು ಸಮಾಲೋಚನೆ ನಡೆಸಲಿದ್ದಾರೆ.


ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ದೇಶದ ಅರ್ಥವ್ಯವಸ್ಥೆ ಸೇರಿದಂತೆ ಇನ್ಬಿತರ ವಿಷಯಗಳನ್ನು ಜನರ ಬಳಿಗೆ ಕೊಂಡೊಯ್ಯಲು ಕಾಂಗ್ರೆಸ್ ತೀರ್ಮಾನಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada