Dailyhunt

ಕೊಪ್ಪಳ : ಮಹನೀಯರ ಜಯಂತಿ ; ಏ.8 ರಂದು ಪೂರ್ವಭಾವಿ ಸಭೆ

ಕೊಪ್ಪಳ, 02 ಏಪ್ರಿಲ್ (ಹಿ.ಸ.) :

ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಗುವ ಮಹನೀಯರ ಜಯಂತಿ ಅಂಗವಾಗಿ ಚರ್ಚಿಸಲು ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಇಲಾಖೆಯಿಂದ ಆಚರಿಸಲಾಗುವ ಶ್ರೀ ಬಸವ ಜಯಂತಿ, ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಶ್ರೀ ಭಗೀರಥ ಜಯಂತಿಗಳ ಕುರಿತು ಚರ್ಚಿಸಲು ಏಪ್ರಿಲ್ 8 ರಂದು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಮುದಾಯದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗುವುದು.

ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಬ0ಧಿಸಿದ ಸಮುದಾಯದ ಮುಖಂಡರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada