Dailyhunt Logo
  • Light mode
    Follow system
    Dark mode
    • Play Story
    • App Story

ಕ್ರೀಡಾ ವಸತಿ ಶಾಲೆಗಳ ಪ್ರವೇಶಕ್ಕೆ ಜೂನ್ 01 ರಂದು ವಿಶೇಷ ಆಯ್ಕೆ ಪ್ರಕ್ರಿಯೆ

ಶಿವಮೊಗ್ಗ, 28 ಮೇ (ಹಿ.ಸ.) :

ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆಗೆ 2026-27ನೇ ಸಾಲಿನ 8ನೇ ತರಗತಿ ಹಾಗೂ ಪ್ರಥಮ ಪಿ.ಯು.ಸಿ. ಮಟ್ಟದ ಪ್ರವೇಶಾತಿಗಾಗಿ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ.

ಈಗಾಗಲೇ ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆಗಳು ನಡೆದಿದ್ದು, ವಿವಿಧ ಕಾರಣಗಳಿಂದ ಅದರಲ್ಲಿ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಉದ್ದೇಶದಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ಈ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಆಯ್ಕೆಯು ಎರಡು ಹಂತಗಳನ್ನು ಒಳಗೊಂಡಿದ್ದು, ತರಬೇತುದಾರರಿಂದ ಕ್ರೀಡಾವಾರು ಆಯ್ಕೆ ಪ್ರಕ್ರಿಯೆ ಹಾಗೂ ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾ ವೈಜ್ಞಾನಿಕ ಪರೀಕ್ಷೆ ಯನ್ನು ಜೂನ್ 1 ರಂದು ನಡೆಸಲಾಗುವುದು

ಅಥ್ಲೆಟಿಕ್ಸ್ ಜಿಲ್ಲಾ ಕ್ರೀಡಾಂಗಣ, ತುಮಕೂರು.

ಹಾಕಿ ಅಕ್ಕಿ ತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣ, ಬೆಂಗಳೂರು.ಕುಸ್ತಿ ಜಿಲ್ಲಾ ಕ್ರೀಡಾಂಗಣ, ಬೆಳಗಾವಿ. ವಾಲಿಬಾಲ್ ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಇಲ್ಲಿ ನಡೆಯಲಿದೆ.

ಪ್ರಮುಖ ನಿಯಮಗಳು:

ಈ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ರಾಜ್ಯದ ಯಾವುದೇ ಭಾಗದ ಕ್ರೀಡಾಪಟುಗಳಿಗೆ ಮುಕ್ತ ಅವಕಾಶವಿರುತ್ತದೆ.

2026-27ನೇ ಸಾಲಿನ ಪ್ರವೇಶಕ್ಕೆ ಈಗಾಗಲೇ ಆಯೋಜಿಸಲಾಗಿದ್ದ ಆಯ್ಕೆ ಪ್ರಕ್ರಿಯೆಗಳಲ್ಲಿ ಭಾಗವಹಿಸದ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದು.

ಒಂದು ವೇಳೆ ಈಗಾಗಲೇ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಆಯ್ಕೆಯಾಗದ ಅಭ್ಯರ್ಥಿಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಬಯಸಿದರೆ, ಈ ಬಗ್ಗೆ ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ದಾಖಲಿಸಿ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada