ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಜಿಲ್ಲೆಯಲ್ಲಿ ಲಸಿಕಾಕರಣಕ್ಕೆ ಲಭ್ಯವಿರುವ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳ ಲಭ್ಯತೆ ಹಾಗೂ ವಿತರಣೆಗೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ ಹಾಗೂ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಲಸಿಕಾಕರಣ ತೀವ್ರಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸೂಚಿಸಿದರು.
ಜಿಲ್ಲೆಯಲ್ಲಿ ಈವರೆಗೆ 18 ವಯೋಮಾನದ ಮೇಲ್ಪಟ್ಟ ಅರ್ಹರಿಗೆ ಲಸಿಕೆ ನೀಡಿಕೆಯಲ್ಲಿ ಶೇ.25 ರಷ್ಟು ಲಸಿಕಾಕರಣ ಕೈಗೊಳ್ಳಲಾಗಿದೆ.
ಕೊರೋನಾ ಸೋಂಕಿನ ಸಂಭವನೀಯ 3 ನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿ ಮಕ್ಕಳ ಚಿಕಿತ್ಸೆಗಾಗಿ ಪ್ರತ್ಯೇಕ ಬೆಡ್ಗಳ ವ್ಯವಸ್ಥೆಯ್ನು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಪರಿಸ್ಥಿತಿಯನುಸಾರ ಸೋಂಕಿತ ಮಗು ಹಾಗೂ ತಾಯಿಯನ್ನು ಹತ್ತಿರದ ಆರೋಗ್ಯ ಕೇಂದ್ರ ಇಲ್ಲವೇ ಆಸ್ಪತ್ರೆಗೆ ಸ್ಥಳಾಂತರಿಸಿ ನಿಗದಿತ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಒದಗಿಸಬೇಕು. ಸೋಂಕಿತರಿoದ ಸೋಂಕು ಇನ್ನೊಬ್ಬರಿಗೆ ಹರಡದಂತೆ ಸೂಕ್ತ ಮುಂಜಾಗ್ರತೆ ಸಂಬಂಧಿಸಿದ ಇಲಾಖಾಧಿಕಾರಿಗಳು ನಿರ್ವಹಿಸುವಂತೆ ನಿರ್ದೇಶಿಸಿದರು.
ಸದ್ಯ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದೆ. ಈಗಾಗಲೇ ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ ಆಕ್ಸಿಜನ್ ವ್ಯವಸ್ಥೆ ಹಾಗೂ ಸೂಕ್ತ ಯೋಜನೆಗಳನ್ನು ಮಾಡಿಟ್ಟುಕೊಳ್ಳುವ ಮೂಲಕ ಸೋಂಕಿತರ ಜೀವಹಾನಿಯಾಗದಂತೆ ಚಿಕಿತ್ಸೆಗೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಮಾಡಿಕೊಳ್ಳಬೇಕೆಂದು ತಿಳಿಸಿದರು.
ಹಿಂದುಸ್ತಾನ್ ಸಮಾಚಾರ/ಎಸಕೆ/ಎಂವೈ

