Dailyhunt Logo
  • Light mode
    Follow system
    Dark mode
    • Play Story
    • App Story

ಮಾಧ್ಯಮದವರ ಸಮಸ್ಯೆಗಳಿಗೆ ಕಾನೂನು ಚೌಕಟ್ಟಿನಲ್ಲಿ ನೆರವು: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, 23 ಆಗಸ್ಟ್ (ಹಿ.ಸ.)

ಆಯಂಕರ್:

ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಿದ್ದ 'ವಿಶ್ವ ಛಾಯಾಗ್ರಹಣ ದಿನ'ದ ಅಂಗವಾದ 'ಫ್ರೋಜನ್ ಮೆಮೊರೀಸ್' ಛಾಯಾಚಿತ್ರ ಪ್ರದರ್ಶನವನ್ನು ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಮಾಧ್ಯಮ ಕ್ಷೇತ್ರ, ಛಾಯಾಗ್ರಾಹಕರ ಪಾತ್ರ ಹಾಗೂ ತಂತ್ರಜ್ಞಾನದ ಬದಲಾವಣೆಗಳ ಕುರಿತು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಒಂದು ಛಾಯಾಚಿತ್ರ ಕೇವಲ ಚಿತ್ರವಲ್ಲ; ಅದು ವ್ಯಕ್ತಿಯ ಬದುಕು, ಸಮಾಜದ ಬೆಳವಣಿಗೆ ಹಾಗೂ ಕಾಲಘಟ್ಟದ ಇತಿಹಾಸವನ್ನು ದಾಖಲಿಸುವ ಪ್ರಮುಖ ಸಾಕ್ಷಿಯಾಗಿದೆ.

ಕಿವಿಯಿಂದ ಕೇಳುವುದಕ್ಕಿಂತ ಕಣ್ಣಿನಿಂದ ನೋಡುವುದಕ್ಕೆ ಜನರು ಹೆಚ್ಚು ನಂಬಿಕೆ ಇಡುತ್ತಾರೆ. ಪತ್ರಿಕೆಯಲ್ಲಿ ಎಷ್ಟೇ ಆಳವಾದ ವಾಸ್ತವಾಂಶವಿದ್ದರೂ, ಸೂಕ್ತ ಚಿತ್ರವಿಲ್ಲದಿದ್ದರೆ ಸುದ್ದಿಯ ಪ್ರಭಾವ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಮಾಧ್ಯಮವು ಸಮಾಜದಲ್ಲಿ ನಡೆಯುವ ಘಟನೆಗಳನ್ನು ದಾಖಲಿಸುತ್ತಾ ರಾಜಕೀಯ ವ್ಯವಸ್ಥೆಯ ಸಮಾನಾಂತರ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಕಾನೂನು ಚೌಕಟ್ಟಿನೊಳಗೆ ನೆರವು ನೀಡುವ ಕುರಿತು ಭರವಸೆ ನೀಡಿದರು.

ಮತ್ತು ತುರ್ತು ಸಂದರ್ಭಗಳಲ್ಲಿ ಪೊಲೀಸರು ಹಾಗೂ ಮಾಧ್ಯಮದವರು ತಮ್ಮ ಕರ್ತವ್ಯ ನಿರ್ವಹಿಸುವಾಗ ಉಂಟಾಗುವ ತೊಂದರೆಗಳನ್ನು ತಪ್ಪಿಸಲು ಶಿಸ್ತಿನ ಹಾಗೂ ಸಮನ್ವಯದ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ನೈಜ ಮತ್ತು ನಕಲಿ ಚಿತ್ರಗಳನ್ನು ಪತ್ತೆಹಚ್ಚುವುದು ಮುಂದಿನ ದಿನಗಳಲ್ಲಿ ದೊಡ್ಡ ಸವಾಲಾಗಲಿದೆ ಎಂದು ಎಚ್ಚರಿಸಿ. ಮಾಧ್ಯಮ ಲೋಕದ ಶ್ರಮ, ಸೇವೆ ಮತ್ತು ಸೃಜನಶೀಲತೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ವೃತ್ತಿಪರ ಛಾಯಾಗ್ರಾಹಕರ ಕಾರ್ಯಕ್ಕೆ ಸರ್ಕಾರದಿಂದ ಎಲ್ಲ ರೀತಿಯ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada