Dailyhunt
ಮಹಾ ಲಸಿಕ ಅಭಿಯಾನಕ್ಕೆ ರಾಯಚೂರು ಜಿಲ್ಲಾಧಿಕಾರಿ ಚಾಲನೆ

ಮಹಾ ಲಸಿಕ ಅಭಿಯಾನಕ್ಕೆ ರಾಯಚೂರು ಜಿಲ್ಲಾಧಿಕಾರಿ ಚಾಲನೆ

ರಾಯಚೂರು, ಜೂ.21(ಹಿ.ಸ): ಕೋವಿಡ್ ವ್ಯಾಕ್ಸಿನ್‌ಗೆ ಸಂಬoಧಿಸಿದoತೆ ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ 45 ವರ್ಷ ಮೇಲ್ಪಟ್ಟವರು ಹಾಗೂ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ 18 ವರ್ಷದಿಂದ 44 ವರ್ಷದೊಳಗಿನ ವಯೋಮಾನದವರ ಆದ್ಯತೆ ಗುಂಪಿನ ಲಸಿಕೆ ಅಭಿಯಾನ ಜಿಲ್ಲೆಯಲ್ಲಿ ಶೇ. 51 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ತಿಳಿಸಿದರು.

ಅವರು ಜೂ. 21ರ ಸೋಮವಾರ ನಗರದ ರಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು


ಕೋವಿಡ್ ವ್ಯಾಕ್ಸಿನ್ ನೀಡುವ ಕುರಿತಂತೆ ಸರ್ಕಾರ ಹಲವು ನಿರ್ದೇಶನಗಳನ್ನು ನೀಡಿದೆ, ಅದರಂತೆ ಆದ್ಯತೆ ಗುಂಪುಗಳು ಹಾಗೂ 45 ವರ್ಷ ಮೇಲ್ಪಟ್ಟವರಿಗೆ ನಿಯಮಾನುಸಾರ ಜಿಲ್ಲೆಯಾದ್ಯಂತ ಲಸಿಕೆಯನ್ನು ನೀಡಲಾಗುತ್ತಿದೆ, ಜಿಲ್ಲೆಯಲ್ಲಿ 4 ಲಕ್ಷ 32 ಸಾವಿರ ಜನರು 45 ವರ್ಷ ಮೇಲ್ಪಟ್ಟವರಿದ್ದಾರೆ, ಅವರಲ್ಲಿ ಈಗಾಗಲೇ 2 ಲಕ್ಷ 21 ಸಾವಿರ ಜನರಿಗೆ ಈಗಾಗಲೇ ಲಸಿಕೆ ನೀಡುವ ಮೂಲಕ ಶೇಕಡ 51% ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಇನ್ನು 18 ವರ್ಷದಿಂದ 44 ವರ್ಷದೊಳಗಿನ 9 ಲಕ್ಷ 49 ಸಾವಿರ ಜನರಿದ್ದು, ಈಗಾಗಲೇ ವಿಕಲಚೇತರು, ಮಂಗಳಮುಖಿಯರು, ಎಪಿಎಂಸಿ ಹಮಾಲರು, ಆರೋಗ್ಯ ಇಲಾಖೆಯ ಸಿಬ್ಬಂದಿ ಕುಟುಂಬಸ್ಥರು, ಪೊಲೀಸ್ ಇಲಾಖೆ ಸಿಬ್ಬಂದಿ ಕುಟುಂಬಸ್ಥರು, ಜೆಸ್ಕಾಂ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಕುಟುಂಬಸ್ಥರು ಸೇರಿದಂತೆ ಆದ್ಯತೆ ಗುಂಪಿನಲ್ಲಿ ಕಾರ್ಯನಿರ್ವಹಿಸುವ 67,280 ಜನರಿಗೆ ಲಸಿಕೆ ನೀಡಲಾಗಿದೆ ಎಂದರು.

ಇಂದು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆರೋಗ್ಯ ಕೇಂದ್ರದಲ್ಲಿ ಏಕಕಾಲಕ್ಕೆ ಅಭಿಯಾನ ಆರಂಭಗೊAಡಿದ್ದು, 20 ರಿಂದ 25 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ, ಜಿಲ್ಲೆಯಲ್ಲಿ ಈಗಾಗಲೇ 45,000 ವೈಲ್ಸ್ಗಳಷ್ಟು ಲಸಿಕೆ ದಾಸ್ತಾನಿದ್ದು, ಮುಂದಿನ ದಿನಗಳಲ್ಲಿ ನಿಯಮಾನುಸಾರ ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ರಿಮ್ಸ್ ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ್ ಪಿರಾಪುರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಂಕರ್, ಆರ್ ಸಿ ಎಚ್ ಅಧಿಕಾರಿ ಡಾ. ವಿಜಯ ಸೇರಿದಂತೆ ರಿಮ್ಸ್ ಹಾಗೂ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿಗಳಿದ್ದರು.



Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada