Dailyhunt
ಮಹಿಳಾ ಸಬಲೀಕರಣಕ್ಕೆ ಸರ್ಕಾರದ ಒತ್ತು: ಸಚಿವ ಚಲುವರಾಯಸ್ವಾಮಿ

ಮಹಿಳಾ ಸಬಲೀಕರಣಕ್ಕೆ ಸರ್ಕಾರದ ಒತ್ತು: ಸಚಿವ ಚಲುವರಾಯಸ್ವಾಮಿ

ಮಂಡ್ಯ, 08 ಏಪ್ರಿಲ್ (ಹಿ.ಸ.):

ಆಯಂಕರ್:

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ 'ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ - 2026' ಕಾರ್ಯಕ್ರಮವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದ್ದು, ಆರ್ಥಿಕ ಸಬಲೀಕರಣದಲ್ಲಿಯೂ ಮಹಿಳೆಯರ ಕೊಡುಗೆ ಮಹತ್ತರವಾಗಿದೆ ಎಂದು ಹೇಳಿದರು. ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಪ್ರಾತಿನಿಧ್ಯ ಅತ್ಯಂತ ಮುಖ್ಯವಾಗಿದ್ದು, ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ವಿಶೇಷ ಮೀಸಲಾತಿ ನೀಡುವ ಮೂಲಕ ಅವರ ಸ್ಥಾನಮಾನವನ್ನು ಬಲಪಡಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಪಿ. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada