Dailyhunt Logo
  • Light mode
    Follow system
    Dark mode
    • Play Story
    • App Story
ಪ್ರತಿ ಪಕ್ಷಗಳ ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಪ್ರತಿ ಪಕ್ಷಗಳ ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ನವದೆಹಲಿ, ಜುಲೈ 31(ಹಿ.ಸ.):

ಆಯಂಕರ್:

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಹಾಗೂ ರಾಮ ಮಂದಿರದ ಕಾಣಿಕೆ ಕಳವು ಪ್ರಕರಣವನ್ನು ವಿರೋಧಿಸಿ ಪ್ರತಿಪಕ್ಷ ಸದಸ್ಯರು ಶುಕ್ರವಾರ ಲೋಕಸಭೆಯಲ್ಲಿ ತೀವ್ರ ಗದ್ದಲ ನಡೆಸಿದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಆಗಸ್ಟ್ 3ರ ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು.

ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿವೆ. ಶುಕ್ರವಾರ ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಗದ್ದಲದ ನಡುವೆಯೇ ಲೋಕಸಭೆಯನ್ನು ಮೊದಲು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಗಿದ್ದು, ಬಳಿಕ ದಿನದ ಉಳಿದ ಅವಧಿಗೆ ಸ್ಥಗಿತಗೊಳಿಸಿ ಸೋಮವಾರಕ್ಕೆ ಮುಂದೂಡಲಾಯಿತು.

ಇದಕ್ಕೂ ಮುನ್ನ ಮರುಸಭೆ ಸೇರಿದ ಬಳಿಕವೂ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ, ಜನನ ಮತ್ತು ಮರಣ ನೋಂದಣಿ ಸಂಬಂಧಿತ ಕಾನೂನಿಗೆ ತಿದ್ದುಪಡಿ ಮಾಡುವ ವಿಧೇಯಕವನ್ನು ಯಾವುದೇ ಚರ್ಚೆಯಿಲ್ಲದೆ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada