Dailyhunt Logo
  • Light mode
    Follow system
    Dark mode
    • Play Story
    • App Story

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ , 22 ಜುಲೈ (ಹಿ.ಸ.)

ಯಂಕರ್ : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಇದೇ ಜುಲೈ 31 ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ವಿವಿಧ ಕ್ಷೇತ್ರಗಳಾದ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಅಥವಾ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಅರ್ಹ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ವೆಬ್ಸೈಟ್ https://awards.gov.in ನಲ್ಲಿ ಜುಲೈ 31 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ವೆಬ್ಸೈಟ್ ಮೂಲಕವೇ ಪಡೆಯಬಹುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada