Dailyhunt
ರಾಯಚೂರು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ರಾಯಚೂರು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ರಾಯಚೂರು, ಜೂ.21(ಹಿ.ಸ): ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಇದೇ ಜೂನ್ 21ರಿಂದ ಜುಲೈ 05ರ ವರೆಗೆ ಪ್ರತಿದಿನ ರಾತ್ರಿ 7 ಗಂಟೆಯಿoದ ಮರು ದಿನ ಬೆಳಿಗ್ಗೆ 5 ಗಂಟೆಯ ವರೆಗೆ ರಾತ್ರಿ ಕರ್ಪೂ ಹಾಗೂ 2021ರ ಜೂ.25ರ ಶುಕ್ರವಾರ ರಾತ್ರಿ 7 ಗಂಟೆಯಿoದ ಜೂ.28ರ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಮತ್ತು ಜು.2ರ ಶುಕ್ರವಾರ ರಾತ್ರಿ 7 ಗಂಟೆಯಿoದ ಜು.5ರ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಹಾಗೂ ಜನಕ್ಕಿಂತ ಹೆಚ್ಚು ಜನರು ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ಗುಂಪು ಸೇರುವುದನ್ನು ಮತ್ತು ಸಾರ್ವಜನಿಕರು ಅನಗತ್ಯವಾಗಿ ಓಡಾಡುವುದನ್ನು ನಿರ್ಬಂಧಿಸಿ, 1973 ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.

ವೆಂಕಟೇಶ ಕುಮಾರ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.


Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada