Dailyhunt Logo
  • Light mode
    Follow system
    Dark mode
    • Play Story
    • App Story
ಸರ್ಕಾರದ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಸರ್ಕಾರದ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಗದಗ, 28 ಮೇ (ಹಿ.ಸ.) :

ಯಂಕರ್ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರದ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಗದಗ ತಾಲೂಕಿನ ಮುಳಗುಂದ ಕೃಷಿ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹುಲಕೋಟಿ ಕೃಷಿ ಸಹಾಯಕ ಅಧಿಕಾರಿ ಎಫ್.ಎಸ್.

ಗುರಿಕಾರ ರೈತರಿಗೆ ಬಿತ್ತನೆ ಬೀಜ ವಿತರಿಸಿ ಮಾತನಾಡಿ, ಜೂನ್ ತಿಂಗಳ ಮೊದಲ ವಾರ ಮುಂಗಾರು ಬಿತ್ತನೆ ಆರಂಭಿಸಲು ಸೂಕ್ತ ಸಮಯವಾಗಿದ್ದು, ರೈತರು ಮಣ್ಣಿನ ತೇವಾಂಶದ ಸ್ಥಿತಿಯನ್ನು ಪರಿಶೀಲಿಸಿ ಬಿತ್ತನೆ ಕಾರ್ಯ ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ಮುಂಗಾರು ಮಳೆಯ ಆಗಮನದ ಹಿನ್ನೆಲೆಯಲ್ಲಿ ಕೃಷಿ ಸಿದ್ಧತೆಗಳು ಆರಂಭಗೊಂಡಿದ್ದು, ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸುವ ಮೂಲಕ ಉತ್ತಮ ಇಳುವರಿ ಪಡೆಯಲು ಪ್ರಯತ್ನಿಸಬೇಕು ಎಂದು ಅವರು ತಿಳಿಸಿದರು.

ಈಗಾಗಲೇ ಕೃಷಿ ಇಲಾಖೆಯ ಮೂಲಕ ಹೆಸರು ಹಾಗೂ ತೊಗರಿ ಬಿತ್ತನೆ ಬೀಜಗಳು ರೈತರಿಗೆ ಲಭ್ಯವಿದ್ದು, ಗೋವಿನ ಜೋಳ ಬೀಜಗಳ ಸರಬರಾಜಿಗೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಸರಿಯಾದ ಸಮಯದಲ್ಲಿ ಬಿತ್ತನೆ ಮಾಡಿದಲ್ಲಿ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತದೆ. ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರೈತರು ಕೃಷಿ ಚಟುವಟಿಕೆಗಳನ್ನು ರೂಪಿಸಿಕೊಳ್ಳುವುದು ಅವಶ್ಯಕ ಎಂದು ಅವರು ಅಭಿಪ್ರಾಯಪಟ್ಟರು.

ಕೃಷಿ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಉತ್ಪಾದನಾ ವೆಚ್ಚ ಕಡಿಮೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬೇಕೆಂದೂ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಶಿಮಸಾಬ ಹಾದಿಮನಿ, ರೈತ ಸಂಘದ ಅಧ್ಯಕ್ಷ ದೇವಪ್ಪ ಅಣ್ಣೀಗೇರಿ, ದೇವರಾಜ ಸಂಗನಪೇಟಿ, ಕಿರಣ ಕುಲಕರ್ಣಿ, ಮಹಾಂತೇಶ ಗುಂಜಳ, ಪ್ರಭಪ್ಪ ಲದ್ವಿ, ಮಹಮ್ಮದಲಿ ಶೇಖ, ಶಂಕ್ರಯ್ಯ ಹಿರೇಮಠ, ಮಂಜುನಾಥ ಕಬಾಡೆ, ಮಹಾಂತೇಶ ಲಾಳಿ, ಮುತ್ತಪ್ಪ ಬಳ್ಳಾರಿ ಹಾಗೂ ಚನ್ನಬಸಪ್ಪ ಕಣವಿ ಸೇರಿದಂತೆ ಹಲವಾರು ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada