Dailyhunt Logo
  • Light mode
    Follow system
    Dark mode
    • Play Story
    • App Story
ಸರ್ಕಾರಿ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿ, ಆಟದ ಮೈದಾನ : ಸಮರ್ಥ್ ಶಾಮನೂರು

ಸರ್ಕಾರಿ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿ, ಆಟದ ಮೈದಾನ : ಸಮರ್ಥ್ ಶಾಮನೂರು

ದಾವಣಗೆರೆ, 01 ಜೂನ್ (ಹಿ.ಸ.) :

ಯಂಕರ್ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಅವುಗಳನ್ನು ಮಾದರಿ ಶಿಕ್ಷಣ ಕೇಂದ್ರಗಳನ್ನಾಗಿ ಪರಿವರ್ತಿಸಲು ಬದ್ಧವಾಗಿದ್ದು ಗ್ರಾಮೀಣ ಮಕ್ಕಳ ಶಿಕ್ಷಣದ ಪ್ರಗತಿಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರು ತಿಳಿಸಿದರು.

ಅವರು ಸೋಮವಾರ ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಹಮ್ಮಿಕೊಂಡಿದ್ದ, 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕರು ಹಾಗೂ ಶಿಕ್ಷಕರ ಮಹಾಸಭಾ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು.

ಮೂರು ತಿಂಗಳ ಹಿಂದಷ್ಟೇ ಬಸಾಪುರ ಗ್ರಾಮಕ್ಕೆ ಭೇಟಿ ನೀಡಿ, ಶಾಲೆಯ ನೂತನ ಕಾಂಪೌಂಡ್ ಹಾಗೂ ಎರಡು ನೂತನ ತರಗತಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಲಾಗಿತ್ತು.

ಈ ಯಶಸ್ವಿ ಯೋಜನೆಯ ಬೆನ್ನಲ್ಲೇ, ಸಾರ್ವಜನಿಕರ ಬೇಡಿಕೆಯಂತೆ ಇದೀಗ ಶಾಲೆಯಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುನ್ನಡೆಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಮಂಡಳಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖಂಡರು, ಮುಂಬರುವ ದಿನಗಳಲ್ಲಿ ಶಾಲೆಗೆ ಅಗತ್ಯವಿರುವ ಇನ್ನೂ ಎರಡು ಹೆಚ್ಚುವರಿ ತರಗತಿ ಕೊಠಡಿಗಳನ್ನು ಮಂಜೂರು ಮಾಡಲಾಗುವುದು ಎಂದರು. ಇದರೊಂದಿಗೆ ಸಣ್ಣ ಮಕ್ಕಳ ದೈಹಿಕ ವಿಕಾಸಕ್ಕಾಗಿ ಶಾಲಾ ಆವರಣದಲ್ಲಿ ಸುಸಜ್ಜಿತವಾದ ಆಟದ ಮೈದಾನ ನಿರ್ಮಿಸಿಕೊಡುವುದಾಗಿ ಹಾಗೂ ಬಸಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಶೀಘ್ರದಲ್ಲೇ ದುರಸ್ತಿಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ಶಾಲೆಗೆ ಅಗತ್ಯವಿರುವ ಮೂಲಸೌಕರ್ಯಗಳು, ಕಟ್ಟಡ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮಸ್ಥರು ಸಹ ಇದಕ್ಕೆ ಕೈಜೋಡಿಸುತ್ತಿರುವುದು ಶ್ಲಾಘನೀಯ. ಆದರೆ, ಈ ವೇಳೆ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಶಾಲೆಯಲ್ಲಿ ಶ್ರದ್ಧೆಯಿಂದ ಚೆನ್ನಾಗಿ ಓದಿ ಉತ್ತಮ ಪ್ರಜೆಗಳಾಗುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada