Dailyhunt Logo
  • Light mode
    Follow system
    Dark mode
    • Play Story
    • App Story

ಶಸ್ತ್ರಚಿಕಿತ್ಸೆಗೆ ಧನಸಹಾಯ ; ಅರ್ಜಿ ಆಹ್ವಾನ

ಕೊಪ್ಪಳ, 01 ಜೂನ್ (ಹಿ.ಸ.) :

ಯಂಕರ್ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದ (ಒಬಿಸಿ) ಸಾರ್ವಜನಿಕರಿಗೆ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಗರಸಭೆಯ 2026-27ನೇ ಸಾಲಿನ ಶೇ.7.25ರ ಯೋಜನೆಯಡಿ ಎಸ್.ಎಫ್.ಸಿ ಮುಕ್ತನಿಧಿ ಅನುದಾನದ ಒಟ್ಟು ಮೊತ್ತದಲ್ಲಿ ಶೇ.40ರಷ್ಟು ಹಣವನ್ನು ಹಿಂದುಳಿದ ವರ್ಗದ ಜನರ ವೈಯಕ್ತಿಕ ಕಾರ್ಯಕ್ರಮಗಳಿಗೆ ಮೀಸಲಿರಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ಆದೇಶದ ಅನ್ವಯ ಈ ಯೋಜನೆ ಜಾರಿಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ವೆಚ್ಚಕ್ಕೆ ಧನಸಹಾಯ ನೀಡಲಾಗುತ್ತದೆ.

ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 15 ರೊಳಗಾಗಿ ಕೊಪ್ಪಳ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಷರತ್ತುಗಳು: ಅರ್ಜಿದಾರರು ಕಡ್ಡಾಯವಾಗಿ ಕೊಪ್ಪಳ ನಗರಸಭೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪ್ರಸ್ತುತ ಸಾಲಿನ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಅಧಿಕೃತ ವೈದ್ಯಕೀಯ ಪ್ರಮಾಣ ಪತ್ರ ಮತ್ತು ಸಂಬಂಧಿತ ಅಸಲಿ ಬಿಲ್ಗಳನ್ನು ಲಗತ್ತಿಸಬೇಕು. ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ಪ್ರತಿಗಳನ್ನು ಸಲ್ಲಿಸಬೇಕು. ಎರಡು ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಭಾವಚಿತ್ರಗಳನ್ನು ನೀಡಬೇಕು.

ನಿಗದಿತ ಕೊನೆಯ ದಿನಾಂಕದ ಬಳಿಕ ಸಲ್ಲಿಕೆಯಾಗುವ ಅಥವಾ ಅಪೂರ್ಣ ದಾಖಲಾತಿಗಳಿರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada