Dailyhunt Logo
  • Light mode
    Follow system
    Dark mode
    • Play Story
    • App Story

ಸಿದ್ದರಾಮಯ್ಯ ರಾಜೀನಾಮೆ ; ಈಶ್ವರಾನಂದಪುರಿ ಸ್ವಾಮೀಜಿ ಪ್ರತಿಕ್ರಿಯೆ

ಹೊಸದುರ್ಗ, 28 ಮೇ (ಹಿ.ಸ.) :

ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ನೀಡಿದ ರಾಜೀನಾಮೆ ಹಿನ್ನೆಲೆಯಲ್ಲಿ ಕನಕಗುರುಪೀಠ, ಹೊಸದುರ್ಗದ ಈಶ್ವರಾನಂದಪುರಿ ಸ್ವಾಮೀಜಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಸಂದೇಶದಲ್ಲಿ ಅವರು, "ಕುರಿ ಹೊಲಸು ತಿನ್ನಲ್ಲ, ಕುರುಬ ಮಾತಿಗೆ ತಪ್ಪಲ್ಲ" ಎಂಬ ಗಾದೆಯನ್ನು ಉಲ್ಲೇಖಿಸಿ, ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ವರಿಷ್ಠರಿಗೆ ನೀಡಿದ ಮಾತಿನಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ರಾಜ್ಯ ಕಂಡ ಮಾಸ್ ಲೀಡರ್ ಎಂದು ಬಣ್ಣಿಸಿದ ಅವರು, ಅವರ ಆಡಳಿತಾವಧಿಯಲ್ಲಿ ಹಲವು ಜನಪರ ಕಾರ್ಯಕ್ರಮಗಳು ಜಾರಿಗೆ ಬಂದಿದ್ದು, ಬಡವರು, ಮಹಿಳೆಯರು, ರೈತರು ಹಾಗೂ ದುರ್ಬಲ ವರ್ಗಗಳ ಏಳ್ಗೆಗೆ ಅವರು ಶ್ರಮಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಅಧಿಕಾರದ ಅವಧಿಯಲ್ಲಿ ಅವರು ಪ್ರಾಮಾಣಿಕವಾಗಿ, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದು ಹೇಳಿದ ಸ್ವಾಮೀಜಿ, ಅವರ ಮುಂದಿನ ಜೀವನದಲ್ಲಿ ದೇವರ ಕೃಪೆ ಇರಲಿ ಎಂದು ಹಾರೈಸಿದ್ದಾರೆ.

ರಾಜಕೀಯವಾಗಿ ಮುಂದಿನ ದಿನಗಳಲ್ಲಿ ಕೂಡ ಸಿದ್ದರಾಮಯ್ಯ ಅವರ ಮಾರ್ಗದರ್ಶನ ರಾಜ್ಯದ ಅಭಿವೃದ್ಧಿಗೆ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada