Dailyhunt Logo
  • Light mode
    Follow system
    Dark mode
    • Play Story
    • App Story
ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ; ಕಣ್ಣೀರಿಟ್ಟ ಸಚಿವ ಸಂತೋಷ್ ಲಾಡ್

ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ; ಕಣ್ಣೀರಿಟ್ಟ ಸಚಿವ ಸಂತೋಷ್ ಲಾಡ್

ಬೆಂಗಳೂರು, 28 ಮೇ (ಹಿ.ಸ.) :

ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಘೋಷಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳು ಭಾವುಕರಾಗಿದ್ದು, ಸಚಿವ ಸಂತೋಷ ಲಾಡ್ ಕಣ್ಣೀರಿಟ್ಟಿದ್ದಾರೆ.

ರಾಜೀನಾಮೆ ಸಲ್ಲಿಸುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರೊಂದಿಗೆ ಉಪಹಾರ ಸಭೆ ನಡೆಸಿದರು.

ಈ ವೇಳೆ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ ಅವರು, ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಹೊಸ ಮುಖ್ಯಮಂತ್ರಿಗೆ ಸಂಪೂರ್ಣ ಸಹಕಾರ ನೀಡುವಂತೆ ಸಚಿವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು. ಸಿಎಂ ರಾಜೀನಾಮೆ ಘೋಷಣೆಯ ಮಾತು ಕೇಳುತ್ತಿದ್ದಂತೆಯೇ ಸಭೆಯಲ್ಲಿ ಕೆಲ ಆಪ್ತ ಸಚಿವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada