ತೋರಣಗಲ್ಲು, 05 ಆಗಸ್ಟ್ (ಹಿ.ಸ.)
ಆಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಹಾಗೂ ಜೆಎಸ್ಡಬ್ಲೂö್ಯ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 07 ರಂದು ಸಂಡೂರು ತಾಲೂಕಿನ ತೋರಣಗಲ್ಲಿನ ಜೆಎಸ್ಡಬ್ಲೂ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಶಿಬಿರವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಅಲಕಾನಂದ ಡಿ.ಮಳಗಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎನ್. ಬಸರೆಡ್ಡಿ ಸೇರಿದಂತೆ ಜೆಎಸ್ಡಬ್ಲೂ ಸಂಸ್ಥೆಯ ಪದಾಧಿಕಾರಿಗಳು ಹಾಗು ಇತರರು ಉಪಸ್ಥಿತರಿರಲಿದ್ದಾರೆ.
ಆರೋಗ್ಯವಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಈ ಮಹತ್ಕಾರ್ಯ ಮತ್ತು ಮಾನವೀಯ ಸೇವೆಗೆ ಕೈಜೋಡಿಸಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಅಧಿಕಾರಿ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ .ವಿ ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

