ಯಾದಗಿರಿ, 05 ಆಗಸ್ಟ್ (ಹಿ.ಸ.):
ಆಯಂಕರ್:
ಸಚಿವ ಶರಣಪ್ರಕಾಶ ಪಾಟೀಲ ಅವರು ಯಾದಗಿರಿ ಜಿಲ್ಲೆಯ ಯಾದಗಿರಿ ಹಾಗೂ ಗುರುಮಠಕಲ್ ತಾಲ್ಲೂಕಿನ ರಾಮಸಮುದ್ರ, ಮುಂಡರಗಿ, ಕಂದಕೂರ ಮತ್ತು ಗುಂಜನೂರು ಗ್ರಾಮಗಳಿಗೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳಲ್ಲಿನ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಹತ್ತಿ ಬೆಳೆ ಹಾನಿಗೊಳಗಾದ ಕೃಷಿ ಭೂಮಿಗಳನ್ನು ವೀಕ್ಷಿಸಿದ ಸಚಿವರು, ರೈತರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳು ಮತ್ತು ಸಂಕಷ್ಟಗಳನ್ನು ಆಲಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಬರಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಪರಿಶೀಲನಾ ಸಂದರ್ಭದಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.

