ನವದೆಹಲಿ, ಜೂ. 24 : ಉದಯರವಿ ನಾಡು ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯಲಿರುವ ಪ್ರತಿಷ್ಠಿತ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತ ಮಹಿಳಾ ಹಾಕಿ ತಂಡಕ್ಕೆ ರಾಣಿ ರಾಂಪಾಲ್ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.
ದೀಪ್ ಗ್ರೇಸ್ ಎಕ್ಕಾ ಹಾಗೂ ಸವಿತಾ ಅವರನ್ನು ಉಪನಾಯಕಿಯರನ್ನಾಗಿ ಆಯ್ಕೆ ಮಾಡಿರುವುದು ವಿಶೇಷ.
16 ಮಂದಿ ಆಟಗಾರರನ್ನು ಕಳೆದ ವಾರ ಪ್ರಕಟಿಸಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಣಿ ರಾಂಪಾಲ್, ಒಲಿಂಪಿಕ್ ನಂತಹ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ತಂಡವನ್ನು ಮುನ್ನಡೆಸುವುದು ಬಹು ದೊಡ್ಡ ಗೌರವ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ರಾಣಿ ನಾಯಕತ್ವದಲ್ಲಿ ಭಾರತ ತಂಡವು 2018ರಲ್ಲಿ ಲಂಡನ್‌ನಲ್ಲಿ ನಡೆದ ಎಫ್‌ಐಎಚ್ ಮಹಿಳಾ ವಿಶ್ವಕಪ್‌ನಲ್ಲಿ ಮೊದಲ ಬಾರಿ ಕ್ವಾರ್ಟರ್ ಫೈನಲ್‌ಗೇರಿತ್ತು
