Dailyhunt
ಹೊಸಪೇಟೆ  ಸರ್ಕಾರಿ ನೌಕರರಿಗೆ ಕೋವಿಡ್ ಲಸಿಕೆ

ಹೊಸಪೇಟೆ ಸರ್ಕಾರಿ ನೌಕರರಿಗೆ ಕೋವಿಡ್ ಲಸಿಕೆ

ಹೊಸಪೇಟೆ (ವಿಜಯನಗರ), ಜೂ. 21 (ಹಿ.ಸ): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರು ಮತ್ತು ನೌಕರರ ಕುಟುಂಬದವರು, ಪಿಬಿಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ಮತ್ತು ಅವರ ಕುಟುಂಬದವರು ಸೋಮವಾರ ಕೋವಿಡ್ ಲಸಿಕೆ ಪಡೆದರು.

ಹೊಸಪೇಟೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ, ತಹಸೀಲ್ದಾರ ವಿಶ್ವನಾಥ, ಹೊಸಪೇಟೆ ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾದ ಜಿ.ಮಲ್ಲಿಕಾರ್ಜುನ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಕಡ್ಲಿ ವೀರಭದ್ರೇಶ, ಕೋಶಾಧ್ಯಕ್ಷರಾದ ಡಿ.ರ‍್ರಿಸ್ವಾಮಿ, ರಾಜ್ಯ ಪರಿಷತ್ ಸದಸ್ಯರಾದ ಎಸ್.ಬಸವರಾಜ ಮತ್ತು ಇತರರು ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Hindusthan Samachar Kannada