ರಾಯಚೂರು, ಜೂ.21(ಹಿ.ಸ): ಜಿಲ್ಲೆಯಾದ್ಯಂತ ಕೋವಿಡ್ - 19 ಎರಡನೇ ಅಲೆ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ನಿರ್ದೇನದಂತೆ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೋಮವಾರ ಕೋವಿಡ್ ಲಸಿಕೆ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಕೋವಿಡ್ ಲಸಿಕೆ ವಿತರಣೆ ಭಾಗವಾಗಿ ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾದಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಕೋವಿಡ್ ಲಸಿಕೆ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು, ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಕೂಲಿ ಕಾರ್ಮಿಕರು ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ
ಗ್ರಾಮ ಪಂಚಾಯತ್‌ಗಳಿಗೆ ಸಿಇಓ ಭೇಟಿ:
ರಾಯಚೂರು ತಾಲೂಕಿನ ಯರಗೇರಾ ಗ್ರಾಮ ಪಂಚಾಯತಿಯಲ್ಲಿ ಕೋವೀಡ್ ಲಸಿಕಾ ಅಭಿಯಾನ ಕಾಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾವಹಿಸಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿಕಾರರಿಗೆ ವ್ಯಾಕ್ಸೀನೇಷನ್ ಲಸಿಕೆ ಹಾಕುವುದನ್ನು ಪರಿಶೀಲಿಸಿದರು.
ನಂತರ ಅವರು, ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಪಂಚಾಯತ್‌ನಲ್ಲಿ ಲಸಿಕಾ ವಿತರಣೆ ಅಭಿಯಾನ ಪರಿಶೀಲಿಸಿದರು. ಸಿರವಾರ ತಾಲೂಕಿನ ಹರವಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಪ್ರತಿಯೊಬ್ಬರು ಲಸಿಕೆ ಪಡೆಯುವಂತೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜನರಿಗೆ ಲಸಿಕೆ ಪಡೆಯಲು ವ್ಯವಸ್ಥೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ದೇವದುರ್ಗ ತಾಲೂಕಿನ ಬಿ.ಗಣೇಕಲ್ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ನರೇಗಾ ಕೂಲಿ ಕಾರ್ಮಿಕರಿಗೆ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ ಜನರು ಉತ್ಸಾಹದಿಂದ ಲಸಿಕೆ ಪಡೆಯುವಲ್ಲಿ ನಿರತರಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ದೇವದುರ್ಗ ತಾಲೂಕಿನ ಚಿಕ್ಕಹೊಣ್ಣಕುಣಿ ಗ್ರಾಮದಲ್ಲಿನ ಲಸಿಕಾ ಹಾಕುವ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚು ಹೆಚ್ಚು ಜನರು ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಮಡೋಳಪ್ಪ ಪಿ.ಎಸ್., ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ನರೇಗಾ), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.
ರಾಯಚೂರು ಜಿಲ್ಲೆಯ 179 ಗ್ರಾಮ ಪಂಚಾಯತ್‌ಗಳಲ್ಲಿ ಒಟ್ಟು 28,646 ಗ್ರಾಮದ/ನರೇಗಾ ಕೂಲಿ ಕಾರ್ಮಿಕರಿಗೆ ಕೋವಿಡ್ ಲಸಿಕೆ ಹಾಕಿಸುವ ಅಭಿಯಾನವು ಜರುಗಿತು.

