ರಾಯಚೂರು, ಜೂ.21(ಹಿ.ಸ) : ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವುದನ್ನು ಸಂಪೂರ್ಣವಾಗಿ ತಡೆಗಟ್ಟುವಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಹೇಳಿದರು.
ಅವರು ಸೋಮವಾರ ನಗರದ ಜಿಲ್ಲಾ ಪಂಚಾಯತ್ ಜಲ ನಿರ್ಮಲ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುರಕ್ಷಿತ ಹಮ್ ಸುರಕ್ಷಿತ ತುಮ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡುಬAದಲ್ಲಿ, ಕೂಡಲೇ ವೈದ್ಯರಲ್ಲಿ ತೆರಳುವಂತೆ ಜನರನ್ನು ಪ್ರೇರಿಪಿಸುವ ಕೆಲಸವನ್ನು ಸ್ವಯಂ ಸೇವ ಸಂಸ್ಥೆಗಳು ಮಾಡಬೇಕು, ಈ ಕಾರ್ಯ ಪರಿಣಾಮಕಾರಿಯಾದಾಗ ಸೋಕು ನಿಯಂತ್ರಣ ಸಾಧ್ಯವಾಗಲಿದೆ, ಕೊರೋನಾ ನಿಯಂತ್ರಣಕ್ಕೆ ತರುವಲ್ಲಿ ಸರ್ಕಾರದೊಂದಿಗೆ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಬೇಕು ಎಂದರು.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ
ಕೋವಿಡ್-19 ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ದಾಖಲಾಗಬೇಕು, ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ನಲ್ಲಿ ಇರಬಾರದು, ಕಳೆದ ವರ್ಷ ಮೊದಲನೇ ಅಲೆಯಲ್ಲಿ ವಲಸೆ ಕಾರ್ಮಿಕರಿಂದ ಸೋಂಕು ಪ್ರಕರಣಗಳು ದೃಢಪಟ್ಟಿದ್ದವು.
ಆದರೆ ಎರಡನೇ ಅಲೆಯು ರೋಗದ ಲಕ್ಷಣಗಳಿದ್ದವರು ಕೋವಿಡ್ ತಪಾಸಣೆ ಮಾಡಿಕೊಳ್ಳುವಲ್ಲಿ ನಿರ್ಲಕ್ಷö್ಯವಹಿಸಿದ್ದರು, ಜಿಲ್ಲಾಡಳಿತದಿಂದ ಮನೆ ಮನೆ ಸಮೀಕ್ಷೆ ಕೈಗೊಂಡು ಸೋಂಕಿತರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾದರು, ಸೋಂಕು ನಿಯಂತ್ರಣಕ್ಕೆ ತರಲು ಲಾಕ್‌ಡೌನ್ ಜಾರಿಗೊಳಿಸಿದ ಪರಿಣಾಮ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಹೇಳಿದರು.
ಕೋವಿಡ್ ಚಿಕಿತ್ಸೆ ನೀಡುವಲ್ಲಿ ಪ್ರಾಣವಾಯು ಪ್ರಮುಖ ಪಾತ್ರವಹಿಸುತ್ತದೆ, ಈ ದಿಸೆಯಲ್ಲಿ ಆಕ್ಸಿಜನ್ ಘಟಕವನ್ನು ಆರಂಭಿಸಲಾಗಿದೆ, ಅದರೊಂದಿಗೆ ಆಕ್ಸಿಜಿನ್ ಘಟಕ ಆರಂಭಿಸಲು ಹಲವು ಸಂಸ್ಥೆಗಳು ಮುಂದೆ ಬರುತ್ತಿರುವುದು ಒಳ್ಳೆಯ ಬೆಳವಣೆಗೆ, ಇತರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲೀ ರಾಯಚೂರಿನಲ್ಲಿ ಸಾವಿನ ಪ್ರಮಾಣ ಅತಿ ಕಡಿಮೆಯಿದೆ ಎಂದರು.
ಈ ವೇಳೆ ಮಾತನಾಡಿದ ಸುರಕ್ಷಿತ ಹಮ್ ಸುರಕ್ಷಿತ ತುಮ್ ಕಾರ್ಯಕ್ರಮದ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು, ಮಹತ್ವಕಾಂಕ್ಷಿ ಜಿಲ್ಲೆಗಳಲ್ಲಿ ರಾಯಚೂರು ಮತ್ತು ಯಾದಗರಿಗಳು ಸೇರಿದ್ದು, ಇಲ್ಲಿ ಆರೋಗ್ಯದೊಂದಿಗೆ ಮೂಲಭೂತ ಸೌಲಭ್ಯ ವೃದ್ದಿಸಲು ನೀತಿ ಆಯೋಗ ನೀಡಿರುವ ಹಲವು ಸೂಚ್ಯಂಕಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳಲಾಗುತ್ತಿದೆ, ಈ ದಿಸೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ನಿಯಂತ್ರಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರ, ಸಮಾಜ್ ಮತ್ತು ಬಜಾರ್ ಎನ್ನುವ ವಿಷಯದಡಿ ಇಂದು ಕಾರ್ಯನಿರ್ವಹಿಸಬೇಕಿದೆ ಎಂದರು.
ಅಪರ ಜಿಲ್ಲಾಧಿಕಾರಿ ಕೆ.ಆರ್. ದುರಗೇಶ್, ಜಿಲ್ಲೆಯ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಇದ್ದರು.

