Dailyhunt Logo
  • Light mode
    Follow system
    Dark mode
    • Play Story
    • App Story
RECRUITMENT | ಗಡಿ ಭದ್ರತಾ ಪಡೆಯಲ್ಲಿ 23 ಹುದ್ದೆಗಳ ನೇಮಕಾತಿ

RECRUITMENT | ಗಡಿ ಭದ್ರತಾ ಪಡೆಯಲ್ಲಿ 23 ಹುದ್ದೆಗಳ ನೇಮಕಾತಿ

Hosadigantha 3 years ago

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗಡಿ ಭದ್ರತಾ ಪಡೆಯಲ್ಲಿ 23 ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಜ್ಯೂನಿಯರ್‌ ಇಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಮತ್ತು ಡಿಪ್ಲೋಮ ವಿದ್ಯಾರ್ಹತೆಯುಳ್ಳ ಮತ್ತು ಫೆಬ್ರವರಿ 24,2023ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಜ್ಯೂನಿಯರ್‌ ಇಂಜಿನಿಯರ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Dailyhunt
Disclaimer: This content has not been generated, created or edited by Dailyhunt. Publisher: Hosadigantha