Dailyhunt Logo
  • Light mode
    Follow system
    Dark mode
    • Play Story
    • App Story
13 ವರ್ಷದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಸೇರಿದ 4 ಹೋಟೆಲ್‌ಗಳು ಪುಡಿಪುಡಿ

13 ವರ್ಷದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಸೇರಿದ 4 ಹೋಟೆಲ್‌ಗಳು ಪುಡಿಪುಡಿ

Hosadigantha 1 week ago

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ಆಡಳಿತ ಕಠಿಣ ಕ್ರಮ ಕೈಗೊಂಡಿದೆ.

ಪ್ರಕರಣಕ್ಕೆ ಸಂಬಂಧ ಹೊಂದಿದೆ ಎನ್ನಲಾದ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸಿದ್ದಾರೆ.

ಪ್ರಕರಣದ ತನಿಖೆ ಇನ್ನಷ್ಟು ತೀವ್ರಗೊಂಡಿದೆ.

ಐದು ದಿನಗಳ ಕಾಲ ದೌರ್ಜನ್ಯ ಆರೋಪ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕಾಣೆಯಾಗಿದ್ದ 13 ವರ್ಷದ ಬಾಲಕಿಯನ್ನು ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲಾಗಿದ್ದು, ಹಲವು ದಿನಗಳ ಕಾಲ ಆಕೆಯ ಮೇಲೆ ಅನೇಕ ಮಂದಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

12 ಆರೋಪಿಗಳ ಬಂಧನ

ಈ ಪ್ರಕರಣದಲ್ಲಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳು ಕಾರ್ಯಾಚರಣೆ ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಯೊಬ್ಬರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ವ್ಯಾಪಕ ಆಕ್ರೋಶ

ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಇಂತಹ ಅಪರಾಧಗಳಿಗೆ ಅವಕಾಶ ನೀಡಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ವಿವಿಧ ರಾಜಕೀಯ ಪಕ್ಷಗಳು ಒತ್ತಾಯಿಸಿವೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha