Dailyhunt Logo
  • Light mode
    Follow system
    Dark mode
    • Play Story
    • App Story
ಬೆಂಗಳೂರು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಹೊಸ ರೂಲ್ಸ್: ಎಲ್ಲೆಲ್ಲಿ ಬೈಕ್-ಆಟೋಗೆ ಅವಕಾಶ ಇದೆ ಗೊತ್ತಾ?

ಬೆಂಗಳೂರು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಹೊಸ ರೂಲ್ಸ್: ಎಲ್ಲೆಲ್ಲಿ ಬೈಕ್-ಆಟೋಗೆ ಅವಕಾಶ ಇದೆ ಗೊತ್ತಾ?

Hosadigantha 9 hrs ago

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗರದ ಪ್ರಮುಖ ಮೇಲ್ಸೇತುವೆ ಹಾಗೂ ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಸಂಚಾರ ನಿರ್ಬಂಧ ಜಾರಿಗೊಳಿಸಿದ ಬಳಿಕದ ಪರಿಸ್ಥಿತಿಯನ್ನು ಪರಿಶೀಲಿಸಿರುವ ಬೆಂಗಳೂರು ಸಂಚಾರ ಪೊಲೀಸರು, ಕೆಲವು ಮಾರ್ಗಗಳಲ್ಲಿ ನಿಯಮಗಳನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳ ಸಂಚಾರಕ್ಕೆ ಸದ್ಯ ಅವಕಾಶ ಮುಂದುವರಿಯಲಿದೆ.

ಇದೇ ವೇಳೆ, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸಂಚಾರ ನಿರ್ಬಂಧಗಳನ್ನು ಒಂದೇ ಬಾರಿಗೆ ಜಾರಿಗೊಳಿಸುವ ಬದಲು ಹಂತ ಹಂತವಾಗಿ ಜಾರಿಗೊಳಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಇನ್ಮುಂದೆ Ola, Uber ಆಯಪ್‌ನಲ್ಲೂ ಸಿಗಲಿದೆ BMTC ಬಸ್‌ಗಳ ಲೈವ್ ಟ್ರ್ಯಾಕಿಂಗ್: ಈ ಬಗ್ಗೆ ಸಾರಿಗೆ ಸಚಿವರು ಏನಂದ್ರು?

ಪ್ರಮುಖ ಮೇಲ್ಸೇತುವೆಗಳು ಮತ್ತು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ ನಂತರ ನಗರದ ವಿವಿಧ ಭಾಗಗಳಲ್ಲಿ ಉಂಟಾದ ಸಂಚಾರ ಪರಿಸ್ಥಿತಿಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮತ್ತೊಂದೆಡೆ, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್‌ನಲ್ಲಿ ನಿರ್ಬಂಧ ಜಾರಿಗೊಳಿಸುವಾಗ ಅಲ್ಲಿನ ಸಂಚಾರ ವ್ಯವಸ್ಥೆ ಹಾಗೂ ಪರ್ಯಾಯ ಮಾರ್ಗಗಳ ಮೇಲಿನ ಪರಿಣಾಮವನ್ನು ಗಮನದಲ್ಲಿಟ್ಟುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha