Dailyhunt Logo
  • Light mode
    Follow system
    Dark mode
    • Play Story
    • App Story
ದೆಹಲಿಯಲ್ಲಿ ಪ್ರತಿಭಟನೆ ತೀವ್ರ: ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಆಪ್ ಹೈಡ್ರಾಮಾ

ದೆಹಲಿಯಲ್ಲಿ ಪ್ರತಿಭಟನೆ ತೀವ್ರ: ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಆಪ್ ಹೈಡ್ರಾಮಾ

Hosadigantha 1 hr ago

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ.

AAP, NSUI, AISA ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಜಂತರ್ ಮಂತರ್ ಕಡೆಗೆ ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.

ರಣರಂಗವಾದ ಜಂತರ್ ಮಂತರ್

ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ತಮ್ಮ ಗಮನಕ್ಕೆ ತರದೆ ಕೈಗೊಳ್ಳಲಾದ ತೀರ್ಮಾನಗಳ ವಿರುದ್ಧ ಕಳೆದ 10 ತಿಂಗಳುಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪಣೆ ಎತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಹೊರಬಿದ್ದ ಬೆನ್ನಲ್ಲೇ ಈ ಪ್ರತಿಭಟನೆ ತೀವ್ರಗೊಂಡಿದೆ. ಭಾನುವಾರ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ಬಸ್‌ಗಳನ್ನು ಆಪ್ ಕಾರ್ಯಕರ್ತರು ತಡೆದು ನಿಲ್ಲಿಸಿದರು. ಮಹಿಳಾ ಪ್ರತಿಭಟನಾಕಾರರು ವಾಹನಗಳ ಮೇಲೆ ಹತ್ತಿ ಆಕ್ರೋಶ ಹೊರಹಾಕಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯಪಡೆಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿತ್ತು.

ಪೊಲೀಸರ ವಿರುದ್ಧ ಸೌರಭ್ ಭಾರದ್ವಾಜ್ ಗಂಭೀರ ಆರೋಪ

ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ದೆಹಲಿ ಆಪ್ ಸಂಚಾಲಕ ಸೌರಭ್ ಭಾರದ್ವಾಜ್ ಮತ್ತು ಶಾಸಕ ಸಂಜೀವ್ ಝಾ ಸೇರಿದಂತೆ 25ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ತಮ್ಮನ್ನು ಫುಟ್‌ಬಾಲ್‌ನಂತೆ ಎತ್ತಿ ಎಸೆದಿದ್ದಾರೆ ಮತ್ತು ಕ್ಯಾಮೆರಾಗಳಿಗೆ ಮುಖ ಕಾಣಿಸದಂತೆ ತಲೆಕೆಳಗಾಗಿ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಸೌರಭ್ ಭಾರದ್ವಾಜ್ ಚಿತ್ರಸಹಿತ 'X' ನಲ್ಲಿ ಆರೋಪಿಸಿದ್ದಾರೆ.

ಇತ್ತ ಐಸಾ AISA ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಮಹಿಳಾ ಪೊಲೀಸರಿಲ್ಲದೆ, ನಂಬರ್ ಪ್ಲೇಟ್ ಇಲ್ಲದ ಖಾಸಗಿ ವಾಹನದಲ್ಲಿ ಪೊಲೀಸರು ಕರೆದೊಯ್ದಿದ್ದಾರೆ ಎಂದು ಸಂಘಟನೆ ದೂರಿದೆ. ಈ ಘಟನೆಯನ್ನು ಖಂಡಿಸಿರುವ ಸಂಸದೆ ಮಹುವಾ ಮೋಯಿತ್ರಾ, 'ಮೋದಿ-ಶಾ ಜೋಡಿಯು ಜ್ಞಾನೇಶ್ ಕುಮಾರ್ ಅವರನ್ನು ಉಳಿಸಲು ಜಂತರ್ ಮಂತರ್ ಅನ್ನು ಯುದ್ಧಭೂಮಿಯನ್ನಾಗಿ ಮಾಡಿದ್ದಾರೆ, ಎಂದು ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡು ಉಪಚುನಾವಣೆ: ಧಾರಾಪುರಂನಲ್ಲಿ ಮುಖ್ಯಮಂತ್ರಿ ವಿಜಯ್ ಬೃಹತ್ ರೋಡ್ ಶೋ

ಚುನಾವಣಾ ಆಯೋಗದ ಸ್ಪಷ್ಟನೆ

ಈ ಇಡೀ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು, 'ಯಾವುದೇ ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ಭಿನ್ನಾಭಿಪ್ರಾಯಗಳು ಮತ್ತು ವಿಭಿನ್ನ ಅವಲೋಕನಗಳು ಸಹಜ. ಆಯೋಗದ ಎಲ್ಲಾ ಆದೇಶಗಳು ಕಾನೂನುಬದ್ಧವಾಗಿಯೇ ಇವೆ' ಎಂದು ಸ್ಪಷ್ಟಪಡಿಸಿದೆ. ಆದರೆ, ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಿರಂತರವಾಗಿ ಮುಂದುವರಿದಿದ್ದು, ನೂರಾರು ಜನರನ್ನು ಬಂಧಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha