Dailyhunt Logo
  • Light mode
    Follow system
    Dark mode
    • Play Story
    • App Story
ಕಲ್ಲು ಕ್ವಾರೆ ದುರಂತ | ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದ ಎಚ್‌ಡಿಕೆ

ಕಲ್ಲು ಕ್ವಾರೆ ದುರಂತ | ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದ ಎಚ್‌ಡಿಕೆ

Hosadigantha 2 weeks ago

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಲ್ಲು ಕ್ವಾರೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು Xನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ.

ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ನೊಂದ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಅಲ್ಲದೇ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು ಎಂದಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha