Dailyhunt
ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ, ಜಾಗತಿಕ ಸಂಘರ್ಷದ ನಡುವೆಯೂ ದೇಶದಲ್ಲಿ ಸ್ಥಿರತೆ: ಇಂಧನ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟೋಕ್ತಿ

ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ, ಜಾಗತಿಕ ಸಂಘರ್ಷದ ನಡುವೆಯೂ ದೇಶದಲ್ಲಿ ಸ್ಥಿರತೆ: ಇಂಧನ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟೋಕ್ತಿ

Hosadigantha 2 weeks ago

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಆಮದು ತಗ್ಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಮತ್ತು ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ದೆಹಲಿಯಲ್ಲಿಂದು ಹೇಳಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಜಗತ್ತಿನ ಬಹುತೇಕ ಭಾಗಗಳಲ್ಲಿ ಅಡುಗೆ ಅನಿಲ, ಕಚ್ಛಾತೈಲ, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಸಮಸ್ಯೆಗೆ ಸಿಲುಕಿವೆ. ಕಚ್ಛಾತೈಲದ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ಚಾಲಿತ ವಾಹನಗಳು ಜನಸಾಮಾನ್ಯರ ಕೈಗೆಟಕುವಂತೆ ಮಾಡಬೇಕಾಗಿದೆ. ಇಂತಹ ಸವಾಲಿನ ಸಂದರ್ಭದಲ್ಲಿಯೂ ದೇಶದಲ್ಲಿ ಪೆಟ್ರೋಲಿಯಂ ಉತನ್ನಗಳ ಆಮದು ತಪ್ಪಿಸಲು ಕೇಂದ್ರ ಸರ್ಕಾರದ ವತಿಯಿಂದ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದ್ದು, ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು ಇಂಧನ ಸ್ವಾವಲಂಬಿ ಯೋಜನೆಗಳನ್ನು ಮತ್ತಷ್ಟು ಪ್ರೋತ್ಸಾಹಿಸಬೇಕಾಗಿದೆ ಎಂದರು.

ಕರ್ನಾಟಕದಲ್ಲಿ ವಿದ್ಯುತ್ ಚಾಲಿತ ವಾಹನಗಳ ತೆರಿಗೆ ವಿನಾಯಿತಿ ಹಿಂಪಡೆದಿರುವ ಕ್ರಮ ಸರಿಯಲ್ಲ. ಇದು ಸ್ವಾವಲಂಬಿ ಭಾರತದ ಅನುಷ್ಠಾನ ಕಾರ್ಯಕ್ರಮಕ್ಕೆ ತೊಡಕಾಗಿದೆ. 2030ರ ವೇಳೆಗೆ ಶೇಕಡ 50ರಷ್ಟು ಇಂಗಾಲ ಹೊರ ಸೂಸುವಿಕೆ ಕಡಿಮೆ ಮಾಡುವ ಗುರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದಕ್ಕೆ ಪೂರಕವಾಗಿ ಸ್ಪಂದಿಸಬೇಕಾಗಿದೆ. ಭಾರತ ಶುದ್ಧ ಇಂಧನ ಮತ್ತು ಎಲೆಕ್ಟ್ರಾನಿಕ್ ವಾಹನಗಳತ್ತ ಸಾಗುತ್ತಿದ್ದು, ಇಡೀ ಜಗತ್ತೇ ದೇಶವನ್ನು ಅನುಸರಿಸುತ್ತಿದೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರ ದೇಶದ ಸುಸ್ಥಿರ ಯೋಜನೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha