Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರು! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರು! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಹವಾಮಾನ ಇಲಾಖೆ ಎಚ್ಚರಿಕೆ

Hosadigantha 1 week ago

ಹೊಸದಿಗಂತ ಡಿಜಿಟಲ್ ಡೆಸ್ಕ್:

ರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದ ಪರಿಣಾಮ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಬಳ್ಳಾರಿ ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ.

ಪೆಸಿಫಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಾರಿಯ ಹಿಂಗಾರು ಮಳೆಯೂ ವಾಡಿಕೆಯಂತೆಯೇ ಉತ್ತಮವಾಗಿರಬಹುದು ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha