Dailyhunt Logo
  • Light mode
    Follow system
    Dark mode
    • Play Story
    • App Story
ರವಿ ಹಂಜ್ ಬೆಂಗಳೂರು ಪೊಲೀಸರ ವಶಕ್ಕೆ: ಬೆಳಗಾವಿಯಲ್ಲಿ ವಿಚಾರಣೆ ಬಳಿಕ ಬಂಧನ ಸಾಧ್ಯತೆ

ರವಿ ಹಂಜ್ ಬೆಂಗಳೂರು ಪೊಲೀಸರ ವಶಕ್ಕೆ: ಬೆಳಗಾವಿಯಲ್ಲಿ ವಿಚಾರಣೆ ಬಳಿಕ ಬಂಧನ ಸಾಧ್ಯತೆ

Hosadigantha 1 day ago

ಹೊಸದಿಗಂತ ವರದಿ ಬೆಳಗಾವಿ:

ಬಸವಣ್ಣನವರ ವ್ಯಕ್ತಿತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಸಾಹಿತಿ ರವಿ ಹಂಜಗಿಮಠ ಅಲಿಯಾಸ್ ರವಿ ಹಂಜ್ ಅವರನ್ನು ಬೆಂಗಳೂರು ನಗರ ಪೊಲೀಸರು ಕೊಚ್ಚಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ರವಿ ಹಂಜ್ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತೇ ಹೊರತು, ಈವರೆಗೆ ಬಂಧಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಗತಿಕ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಅವರು ಶುಕ್ರವಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರ ಬೆನ್ನಲ್ಲೇ ರವಿ ಹಂಜ್ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು.

ಪ್ರೀತಿಸಿದಾಕೆಯ ರುಂಡ ಕಡಿದು ಬರ್ಬರ ಹ*ತ್ಯೆ ಕೇಸ್: ಅಪರಾಧಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಲುಕೌಟ್ ನೋಟಿಸ್ ಜಾರಿಯಲ್ಲಿದ್ದರೂ ಶನಿವಾರ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರನ್ನು ಬೆಂಗಳೂರು ನಗರ ಪೊಲೀಸರು ಕಾಯ್ದೆ ಪ್ರಕಾರ ವಶಕ್ಕೆ ಪಡೆದಿದ್ದಾರೆ. ಸದ್ಯ ವಿಚಾರಣೆ ನಡೆಯುತ್ತಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ಬಂಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಬೆಂಗಳೂರು ನಗರದ ಪೊಲೀಸರು ನಿರ್ಧರಿಸಲಿದ್ದಾರೆ ಎಂದು ಪ್ರಕಾಶ್ ನಿಕ್ಕಂ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿಚಾರಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರವಿ ಹಂಜ್ ಅವರನ್ನು ಬೆಳಗಾವಿಗೆ ಕರೆತರುವ ಸಾಧ್ಯತೆಯಿದೆ. ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳು ಬಳಿಕ ನಡೆಯಲಿವೆ ಎಂದು ಪೊಲೀಸ್ ಆಯುಕ್ತರು ಹೊಸ ದಿಗಂತ ಪತ್ರಿಕೆಯ ಪ್ರತಿನಿಧಿ ಅವರಿಗೆ ಮಾಹಿತಿ ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Hosadigantha