Hosadigantha
25k Followersಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ 33 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಸಾಮಾನ್ಯ ಅರ್ಜಿದಾರರು 200/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಚಲನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಕಂಪ್ಯೂಟರ್ ಜ್ಞಾನ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ರಾಯಚೂರು ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Disclaimer
This story is auto-aggregated by a computer program and has not been created or edited by Dailyhunt Publisher: Hosadigantha