Dailyhunt Logo
  • Light mode
    Follow system
    Dark mode
    • Play Story
    • App Story
ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಸವಾರನಿಗೆ ಗಂಭೀರ ಗಾ*ಯ!

ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಸವಾರನಿಗೆ ಗಂಭೀರ ಗಾ*ಯ!

Hosadigantha 2 weeks ago

ಹೊಸದಿಗಂತ ವರದಿ ಅಂಕೋಲಾ

ಅಂಕೋಲಾ:ಜಿಲ್ಲಾಕೇಂದ್ರ ಕಾರವಾರದಿಂದ ಸಭೆ ಮುಗಿಸಿ ಉಡುಪಿಗೆ ತೆರಳುತ್ತಿದ್ದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆತಾಲೂಕಿನ ಬಾಳೆಗುಳಿಯ ವರದರಾಜ ಹೋಟಲ್ ಬಳಿ ಸಂಭವಿಸಿದ್ದು ಗಾಯಾಳುವನ್ನು ಸಚಿವ ಖಾದರ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿದ್ದಾರೆ.

ತಾಲೂಕಿನ ಅಲಗೇರಿ ನಿವಾಸಿ ಸಂದೀಪ ನಾಯಕ ಎನ್ನುವವರು ತಲೆಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು ಕಾರವಾರ ಕಡೆಯಿಂದ ಸಚಿವರು ಬರುತ್ತಿದ್ದ ಸಂದರ್ಭದಲ್ಲಿ ಎಸ್ಕಾರ್ಟ್ ವಾಹನಕ್ಕೆ ಸ್ಕೂಟಿ ಸವಾರ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha