Dailyhunt
ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

Hosadigantha 1 week ago

ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪತ್ರಕರ್ತೆ ರಾಣಾ ಅಯ್ಯೂಬ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ, ದೆಹಲಿ ಪೊಲೀಸರಿಗೆ ಮತ್ತು ಸಾಮಾಜಿಕ ಮಾಧ್ಯಮ ಎಕ್ಸ್ ಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ರಾಣಾ ಅಯ್ಯೂಬ್ ಸಾಮಾಜಿಕ ಮಾಧ್ಯಮದಲ್ಲಿ ಹಿಂದು ದೇವತೆಗಳು ಮತ್ತು ಸಾವರ್ಕರ್ ಕುರಿತು ಅವಮಾನಿಸಿ ಪೋಸ್ಟ್ ಹಾಕಿದ್ದು, ಅವುಗಳನ್ನು ತೆಗೆದುಹಾಕುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್, ನಿಮ್ಮ ಪೋಸ್ಟ್ ಗಳು ಅವಹೇಳನಕಾರಿ ಮತ್ತು ಕೋಮು ಭಾವನೆ ಕೆರಳಿಸುವಂತಿವೆ ಎಂದು ಚಾಟಿ ಬೀಸಿದೆ .

ಗುಜರಾತ್ ಜನತೆ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ

ಇದೇ ವೇಳೆ ಈ ಕುರಿತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಲಾಗಿದೆ ಎಂಬುದನ್ನು ಗಮನಿಸಿದ ಕೋರ್ಟ್, ಕೇಂದ್ರ ಸರ್ಕಾರ, ದೆಹಲಿ ಪೊಲೀಸರು ಹಾಗೂ ಸಾಮಾಜಿಕ ಮಾದ್ಯಮಕ್ಕೆ ಜೊತೆಯಾಗಿ ಕ್ರಮ ವಹಿಸುವಂತೆ ಸೂಚಿಸಿದ್ದು, ಏಪ್ರಿಲ್ 10 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha