Dailyhunt
ತುಮಕೂರಿನಲ್ಲಿ ನವಿಲುಗಳ ಸಾವಿಗೆ 'H5N1' ಸೋಂಕು ಕಾರಣ! ಹಕ್ಕಿಜ್ವರದ ಆತಂಕ

ತುಮಕೂರಿನಲ್ಲಿ ನವಿಲುಗಳ ಸಾವಿಗೆ 'H5N1' ಸೋಂಕು ಕಾರಣ! ಹಕ್ಕಿಜ್ವರದ ಆತಂಕ

Hosadigantha 2 weeks ago

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರಿನಲ್ಲಿ ಕೆಲವು ದಿನಗಳ ಹಿಂದೆ ಮೂವತ್ತೈದಕ್ಕೂ ಹೆಚ್ಚು ನವಿಲುಗಳು ಮೃತಪಟ್ಟಿದ್ದವು. ಬಿಸಿಲ ಬೇಗೆಯನ್ನು ತಾಳಲಾರದೆ ನವಿಲುಗಳು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿತ್ತು.

ಆದರೆ ಇದೀಗ ನವಿಲುಗಳ ಸಾವಿಗೆ H5N1 ಸೋಂಕು ಕಾರಣವಾಗಿದೆ.

ನವಿಲುಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.ಇದೀಗ ಸಾವಿಗೆ ಹಕ್ಕಿಜ್ವರವೇ ಕಾರಣ ಎಂದು ಎಫ್‌ಎಸ್‌ಎಲ್‌ ವರದಿ ಹೇಳಿದೆ.

11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದು, ಎಲ್ಲೆಡೆ ಆತಂಕ ಸೃಷ್ಟಿಯಾಗಿತ್ತು. ಬಿಸಿಲು ಹಾಗೂ ನಿರ್ಜಲೀಕರಣದಿಂದ ಸಾವು ಸಂಭವಿಸಿದೆ ಎಂದುಕೊಳ್ಳಲಾಗಿತ್ತು. ಆದರೆ ಇದೀಗ ಹಕ್ಕಿಜ್ವರ ಇರುವುದು ದೃಢಪಟ್ಟಿದ್ದು, ಪಶುಸಂಗೋಪನಾ ಇಲಾಖೆ ಹಾಗೂ ಜಿಲ್ಲಾಡಳಿತ ಹೈ ಅಲರ್ಟ್‌ ಘೋಷಣೆ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Hosadigantha