ಪಂಚಾಯ್ತಿ ಅಧ್ಯಕ್ಷರಾಗಿ ಮಕ್ಕಳ ಅಹವಾಲಿಗೆ ಸ್ಪಂದಿಸಿದ ಈಶ್ವರ ಖಂಡ್ರೆ
ಬೆಂಗಳೂರು : ಯಾವುದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಯಲ್ಲಿ ಶೌಚಾಲಯ ಅಥವಾ ಕುಡಿಯುವ ನೀರಿನ ಸಮಸ್ಯೆ ಇದ್ದರೆ ಪರಿಹರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮಕ್ಕಳಿಗೆ ಭರವಸೆ ನೀಡಿದರು.
ಜಕ್ಕೂರಿನಲ್ಲಿರುವ ಮಹಾತ್ಮಾಗಾಂಧೀ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿಂದು ನಡೆದ ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಕ್ಕಳ ಅಹವಾಲು ಆಲಿಸಿದ ಅವರು, ಪ್ರತಿಯೊಂದು ಶಾಲೆಯಲ್ಲೂ ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಇರಬೇಕು, ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂಬ ಸ್ಪಷ್ಟ ಸೂಚನೆ ನೀಡಲಾಗಿದೆ. ಯಾವುದೇ ಶಾಲೆಯಲ್ಲಿ ಸಮಸ್ಯೆ ಇದ್ದರೆ ಪರಿಹರಿಸುವಂತೆ ಸೂಚಿಸಲಾಗುವುದು ಎಂದರು.
ರಾಜ್ಯದಲ್ಲಿರುವ ಎಲ್ಲ 5927 ಗ್ರಾಮ ಪಂಚಾಯತಿಗಳಿಗೂ ಈ ಬಗ್ಗೆ ಮತ್ತೊಮ್ಮೆ ಸೂಚನೆ ನೀಡುವುದಾಗಿಯೂ ಸಚಿವರು ತಿಳಿಸಿದರು.

ತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೂ ಕ್ರಮ:
ಘನ ತ್ಯಾಜ್ಯ, ಹಸಿ ತ್ಯಾಜ್ಯದ ಸಮಸ್ಯೆ ಈಗ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗುತ್ತಿದೆ. ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಮಕ್ಕಳು ಕೂಡ ತಮ್ಮ ಪಾಲಕರಿಗೆ ಹಸಿ ಕಸ ಒಣ ಕಸ ವಿಂಗಡಿಸುವ ಬಗ್ಗೆ ತಿಳಿಯ ಹೇಳಬೇಕು. ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಯನ್ನು ಬಿಡಬೇಕು. ಸಹಪಾಠಿಗಳಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಅಪಾಯಕಾರಿ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು ಎಂದ ಅವರು ಸರ್ಕಾರ ಕಸದಿಂದ ರಸ ಅಂದರೆ ಕಸದಿಂದಲೂ ಆದಾಯ ಸೃಜನೆಗೆ ಕ್ರಮ ವಹಿಸಿದೆ ಎಂದರು. ಬೀದಿ ನಾಯಿಗಳ ಕಾಟದ ಬಗ್ಗೆ ಮಕ್ಕಳು ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು ತಾವು ಅರಣ್ಯ ಸಚಿವರಾಗಿದ್ದಾಗ ಎದುರಾಗುತ್ತಿದ್ದ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ವಿವರಿಸಿ, ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಸ್ಥಳೀಯ ಆಡಳಿತ ಕ್ರಮ ವಹಿಸುತ್ತದೆ ಎಂದರು.