ಡಿಸಿಎಂ ಅಪರ ಕಾರ್ಯದರ್ಶಿಯಾಗಿ ಡಾ.ವೆಂಕಟೇಶಯ್ಯ ಆಪ್ತ ಕಾರ್ಯದರ್ಶಿಯಾಗಿ ಕೆ.ಚನ್ನಬಸಪ್ಪ ಮುಂದುವರಿಕೆ
ಬೆಂಗಳೂರು: ಹಿರಿಯ ಕೆಎಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ಕಂದಾಯ ಆಯುಕ್ತಾಲಯದ ಹೆಚ್ಚುವರಿ ಕಂದಾಯ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.
ಈ ಹುದ್ದೆಯಲ್ಲಿದ್ದ ಡಾ: ಬಿ. ಉದಯ ಕುಮಾರ್ ಶೆಟ್ಟಿ ಅವರನ್ನು ಸಿಆಸುಇಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಕಂದಾಯ ಆಯುಕ್ತರ ಹುದ್ದೆಯ ಜೊತೆಗೆ ಡಾ.ವೆಂಕಟೇಶಯ್ಯನವರನ್ನು ಉಪ ಮುಖ್ಯ ಮಂತ್ರಿ ಡಾ. ಜಿ.ಪರಮೇಶ್ವರ ಅವರ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲೂ ಇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿಕಟ ಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ವೆಂಕಟೇಶಯ್ಯನವರನ್ನು ಸಿದ್ದರಾಮಯ್ಯನವರ ರಾಜಿನಾಮೆ ಬಳಿಕ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಡಾ. ಜಿ.ಪರಮೇಶ್ವರ ಅವರು ಗೃಹ ಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಹಿರಿಯ ಕೆಎಎಸ್ ಅಧಿಕಾರಿ ಕೆ.
ಚನ್ನಬಸಪ್ಪ ಅವರನ್ನು ಉಪಮುಖ್ಯಮಂತ್ರಿಯವರು ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೊಂಡಿದ್ದು ಆದೇಶ ಈ ದಿನ ಹೊರಬಿದ್ದಿದೆ.