ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಲು ಕಾರ್ಮಿಕ ನೀತಿಯಲ್ಲಿ ಬದಲಾವಣೆಗೆ ಚಿಂತನೆ: ಶೋಭಾ ಕರಂದ್ಲಾಜೆಬೆಂಗಳೂರು: ಸಂಘಟಿತ ಕಾರ್ಮಿಕರಂತೆಯೇ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಮಿಕ ನೀತಿಗಳನ್ನು ಸಂಯೋಜಿಸಿ "ನಾಲ್ಕು ಕೋಡ್"ಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಬಿ.ಪ್ಯಾಕ್ ಮತ್ತು ಸಿಜಿಐ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಆಯೋಜಿಸಿದ್ದ ʼಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರಸ್ತುತ 29 ಕಾರ್ಮಿಕ ನೀತಿಗಳು ಜಾರಿಯಲ್ಲಿದ್ದು, ಈ ಎಲ್ಲವೂ ಬ್ರಿಟಿಷರ ಕಾಲದಲ್ಲಿ ರೂಪಿಸಲಾಗಿತ್ತು.