Dailyhunt
20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು

20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು

20 ವರ್ಷದ ಯುವತಿಗೆ ಮಾದಕ ದ್ರವ್ಯ ನೀಡಿ ಚಲಿಸುತ್ತಿರುವ ಕಾರಿನಲ್ಲಿ ಐವರು ಸಾಮೂಹಿಕ ಅತ್ಯಾಚಾರಗೈದ ಘಟನೆಯು ತಮಿಳುನಾಡಿನ ಚೆನ್ನೈ ಸಮೀಪದ ಕಾಂಚಿಪುರಂನಲ್ಲಿ ನಡೆದಿದೆ.

ಮೊಬೈಲ್​ ಫೋನ್​ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ 2 ದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಅತ್ಯಾಚಾರ ಎಸಗಿದ ಬಳಿಕ ದುಷ್ಕರ್ಮಿಗಳು ಸಂತ್ರಸ್ತೆಯನ್ನು ರಸ್ತೆ ಬದಿಯಲ್ಲಿ ಎಸೆದಿದ್ದಾರೆ. ಈ ಸಂಬಂಧ ವಿಶೇಷ ತಂಡ ರಚಿಸಿದ್ದ ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಯುವತಿ ಗುಣಶೀಲನ್​ ಎಂಬ ಪರಿಚಯಸ್ಥನನ್ನು ಭೇಟಿಯಾಗಿದ್ದಳು. ಈ ವೇಳೆ ಆತ ತಂಪು ಪಾನೀಯದಲ್ಲಿ ಮತ್ತು ಬರುವ ವಸ್ತುವನ್ನು ಮಿಶ್ರಣ ಮಾಡಿ ನೀಡಿದ್ದರು.

ಇದಾದ ಬಳಿಕ ಗುಣಶೀಲನ್​ ತನ್ನ ಸ್ನೇಹಿತರ ಜೊತೆ ಸೇರಿ ಈಕೆಯ ಮೇಲೆ ಅತ್ಯಾಚಾರ ಎಸಗಿದ್ದನು ಎನ್ನಲಾಗಿದೆ. ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia