ಬೆಳಗಾವಿ: ಕೋವಿಡ್ ಪರಿಹಾರ ನಿಧಿಗೆ ಶಾಸಕರ 1 ತಿಂಗಳ ಹಾಗೂ ಸಚಿವರ 1 ವರ್ಷದ ಸಂಬಳ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚಿಸಿರುವ ಬೆನ್ನಲ್ಲೇ ಇದೀಗ ಚಿಕ್ಕೋಡಿ-ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ತಮ್ಮ 3 ತಿಂಗಳ ವೇತನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಕೋವಿಡ್ ಪರಿಹಾರ ನಿಧಿಗೆ 1 ತಿಂಗಳ ವೇತನ ನೀಡಿರುವ ಶಾಸಕ, ತಮ್ಮ ಕ್ಷೇತ್ರದ ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳ ಸಂಬಳ ನೀಡುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಶಾಸಕ ಗಣೇಶ್ ಹುಕ್ಕೇರಿ, ಇಂದು ಮೇ 1 ಕಾರ್ಮಿಕ ದಿನಾಚರಣೆ. ಕೊರೊನಾ ಮಹಾಮಾರಿ ಹೊಡೆದೋಡಿಸಲು ಹಲವಾರು ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ.

