Dailyhunt
ಐಪಿಎಲ್ 2021: ಅಗ್ರಸ್ಥಾನ ಕಾಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್

ಐಪಿಎಲ್ 2021: ಅಗ್ರಸ್ಥಾನ ಕಾಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್

ನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೆಕೆಆರ್ ನಡುವಣ ಪಂದ್ಯದಲ್ಲಿ ಕೆಕೆಆರ್ ತಂಡ ಸತತವಾಗಿ ವಿಕೆಟ್ ಗಳನ್ನು ಕಳೆದುಕೊಂಡ ನಂತರವು ದಿನೇಶ್ ಕಾರ್ತಿಕ್, ಆಯಂಡ್ರೆ ರಸೆಲ್ ಹಾಗೂ ಪ್ಯಾಟ್ ಕಮಿನ್ಸ್ ಅವರ ಬ್ಯಾಟಿಂಗ್ ನಿಂದ ಈ ಪಂದ್ಯ ಕೊನೆಯ ಹಂತದವರೆಗೂ ರೋಮಾಂಚನಕಾರಿಯಾಗಿತ್ತು. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ 18ರನ್ ಗಳ ರೋಚಕ ಜಯ ಸಾಧಿಸಿತು.

ಚೆನ್ನೈ ಸೂಪರ್ ಕಿಂಗ್ಸ್ ಹ್ಯಾಟ್ರಿಕ್ ಗೆಲುವನ್ನು ಸಾಧಿಸುವ ಮೂಲಕ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ. ನೆಟ್ ರನ್ ರೇಟ್ ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಮುನ್ನಡೆಯಲ್ಲಿದ್ದು‌, ಆರ್.ಸಿ.ಬಿ. ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಹಿಂದಿಕ್ಕಿ ಮೊದಲನೇ ಸ್ಥಾನ ಕಾಯ್ದುಕೊಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia