ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಕಾಅರೊಂದು ಅಪಘಾತಕ್ಕೀಡಾಗಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸುಟ್ತು ಕರಕಲಾಗಿರುವ ಘಟನೆ ನಡೆದಿದೆ.
ಕಾರಿನೊಳಗೇ ಚಾಲಕ ಸುಟ್ತು ಕರಕಲಾಗಿದ್ದಾನೆ. ಚಾಲಕನ ಗುರುತು ಸಿಗದಷ್ಟರ ಮಟ್ಟಿಗೆ ಮುಖ ಕೂಡ ಸುಟ್ಟು ಹೋಗಿದೆ.
ವೋಕ್ಸ್ ವ್ಯಾಗನ್ ಕಂಪನಿಗೆ ಸೇರಿದ ಕಾರು ಇದಾಗಿದ್ದು, ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ದೌಡಾಯಿಸಿದ್ದು, ಕಾರು ಚಾಲಕನ ಗುರುತು ಪತ್ತೆಗಾಗಿ ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

