Dailyhunt Logo
  • Light mode
    Follow system
    Dark mode
    • Play Story
    • App Story
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ : ಬೀದಿಗಿಳಿದು ಪರೇಡ್​ ಮಾಡಲು ಅವಕಾಶ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ : ಬೀದಿಗಿಳಿದು ಪರೇಡ್​ ಮಾಡಲು ಅವಕಾಶ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಳಗಾವಿ: ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ ಆರ್.​​ಎಸ್.​​ಎಸ್ ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಜನಗಣತಿ ಪ್ರಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಈ ಸಭೆಯಲ್ಲಿ ದೇಶದಾದ್ಯಂತ ಇರುವ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ.

ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಆರ್.ಎಸ್.ಎಸ್ ನವರು ಕಾರ್ಯಕ್ರಮ ಬೇಕಿದ್ದರೆ ನಡೆಸಿಕೊಳ್ಳಲಿ. ಆದರೆ, ಬೀದಿಗಿಳಿದು ಪರೇಡ್​ಗೆ ಅವಕಾಶ ಇಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದರೆ.

ನಾನು ಗೃಹ ಸಚಿವನಾಗಿ ಇರುವ ತನಕ ಆರ್​​.ಎಸ್.​​ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯೆ ಇದೀಗ ಬೆಳಗಾವಿ ಕಾರ್ಯಕ್ರಮ ಆರಂಭವಾಗುವುದಕ್ಕೂ ಮೊದಲೇ ಮತ್ತೊಮ್ಮೆ ಪರೇಡ್ ಗೆ ಅವಕಾಶವಿಲ್ಲ ಎಂದು ಪುನರುಚ್ಚರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia