ಬೆಂಗಳೂರು: 2025ನೇ ಸಾಲಿನ ಬಿ-ಫಾರ್ಮಾ ಲ್ಯಾಟರಲ್ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೇಳಾಪಟ್ಟಿ ಪ್ರಕಟಿಸಿದೆ.
ಈಗಾಗಲೇ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆ.19 ಮತ್ತು 20ರಂದು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಆ.20ರಿಂದ 23ರವರೆಗೆ ಇಚ್ಛೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಆ.24ರಂದು ಸಂಜೆ 4ರ ನಂತರ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ. ಆ.25ರಂದು ಸಂಜೆ 4ರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಆ.27 ಕೊನೆ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

