ಕನ್ನಡದುನಿಯಾ

1.6M Followers

BIG BREAKING: ಮಕ್ಕಳಿಗೆ ಉಚಿತ ಶಿಕ್ಷಣ, ವಿಮೆ, ಪ್ರತಿ ತಿಂಗಳು ಹಣ, ಠೇವಣಿ ಸೌಲಭ್ಯ; ಪೋಷಕರಿಲ್ಲದವರಿಗೆ 'ಪಿಎಂ ಕೇರ್ಸ್ ಫಾರ್ ಚಿಲ್ಟ್ರನ್ಸ್' ಯೋಜನೆ ಜಾರಿ

29 May 2021.6:50 PM

ನವದೆಹಲಿ: ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪಿಎಂ ಕೇರ್ಸ್ ನಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ.

ದೇಶದಲ್ಲಿ ಕೊರೋನಾದಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊರೋನಾದಿಂದ ಅನಾಥರಾದ ಮಕ್ಕಳಿಗೆ ನೆರವಾಗಲು ನಿರ್ಧರಿಸಲಾಗಿದೆ.

ಮಕ್ಕಳು ದೇಶದ ಭವಿಷ್ಯ ಪ್ರತಿನಿಧಿಸುತ್ತಾರೆ. ಅವರ ರಕ್ಷಣೆ, ಉಜ್ವಲ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಮೋದಿ ಹೇಳಿದ್ದಾರೆ.

ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಟ್ರನ್ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತದೆ. ಉಚಿತ ಶಿಕ್ಷಣ, ಪ್ರತಿತಿಂಗಳು ಆರ್ಥಿಕ ನೆರವು, ಆರೋಗ್ಯ ವಿಮೆ, ಮಕ್ಕಳ ಹೆಸರಲ್ಲಿ ಠೇವಣಿ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags