ಕನ್ನಡದುನಿಯಾ

1.6M Followers

BIG BREAKING NEWS: 1 -9 ನೇ ತರಗತಿ ಪರೀಕ್ಷೆ ರದ್ದು, ನಾಳೆ ಸರ್ಕಾರದ ನಿರ್ಧಾರ..?

28 Mar 2021.1:22 PM

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನಲೆಯಲ್ಲಿ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಳೆ ತೀರ್ಮಾನ ಕೈಗೊಳ್ಳಲಾಗುವುದು.

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾತನಾಡಿ, 1 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ನಾಳೆ ಸಿಎಂ ಜೊತೆಗಿನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಲಾಗುವುದು. ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಕೆಲವೊಂದು ಸಲಹೆಗಳನ್ನು ನೀಡಲಾಗಿದ್ದು, ಅವುಗಳ ಬಗ್ಗೆ ಚರ್ಚೆ ನಡೆಸಲಾಗುವುದು. 1 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಾಳೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags