ಕನ್ನಡದುನಿಯಾ

1.5M Followers

BIG NEWS: 1 ರಿಂದ 5 ನೇ ಕ್ಲಾಸ್ ಆರಂಭಕ್ಕೆ ಮುಹೂರ್ತ ಫಿಕ್ಸ್.? ದಸರಾ ರಜೆ ಮುಗಿದ ಬಳಿಕ ಶಾಲೆ ಶುರು.?

28 Sep 2021.05:58 AM

ಬೆಂಗಳೂರು: ದಸರಾ ರಜೆ ಮುಗಿದ ನಂತರ ಒಂದರಿಂದ ಐದನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20 ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತಿದೆ ಎನ್ನಲಾಗಿದೆ. ಅಕ್ಟೋಬರ್ 20 ಕ್ಕೆ ಮಧ್ಯಂತರ ರಜೆ ಮುಗಿದ ನಂತರ ಒಂದರಿಂದ ಐದನೇ ತರಗತಿ ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags