Dailyhunt Logo
  • Light mode
    Follow system
    Dark mode
    • Play Story
    • App Story
BIG NEWS : 'ಜಾತಿ ಪ್ರಮಾಣ ಪತ್ರ' ಕೇಳಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ ? ಅರಕಲಗೂಡು ತಹಸೀಲ್ದಾರ್ ವಿರುದ್ಧ ಆಕ್ರೋಶ |WATCH VIDEO

BIG NEWS : 'ಜಾತಿ ಪ್ರಮಾಣ ಪತ್ರ' ಕೇಳಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ ? ಅರಕಲಗೂಡು ತಹಸೀಲ್ದಾರ್ ವಿರುದ್ಧ ಆಕ್ರೋಶ |WATCH VIDEO

ಅರಕಲಗೂಡು: ಜಾತಿ ಪ್ರಮಾಣ ಪತ್ರ ಪಡೆಯಲು ತಹಸೀಲ್ದಾರ್ ಕಚೇರಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅರಕಲಗೂಡಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೌದು. ಪೊಲೀಸ್ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಗತ್ಯವಾಗಿದ್ದ ಜಾತಿ ಪ್ರಮಾಣ ಪತ್ರಕ್ಕಾಗಿ ತಹಸೀಲ್ದಾರ್ ಕಚೇರಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ ಎಂಬ ಆರೋಪ ಅರಕಲಗೂಡಿನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಸುಮಾರು 20 ದಿನಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ದರೂ ಪ್ರಮಾಣ ಪತ್ರ ಸಿಗದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ವಿದ್ಯಾರ್ಥಿಯ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪ ಕೇಳಿಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸ್ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು (ಶನಿವಾರ) ಕೊನೆಯ ದಿನವಾಗಿದ್ದರಿಂದ, ಸುಮಾರು 20 ದಿನಗಳ ಹಿಂದೆಯೇ ವಿದ್ಯಾರ್ಥಿ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ನಿಗದಿತ ಅವಧಿಯಲ್ಲೂ ಪ್ರಮಾಣ ಪತ್ರ ದೊರೆಯದ ಹಿನ್ನೆಲೆಯಲ್ಲಿ ಅವರು ತಹಸೀಲ್ದಾರ್ ಕಚೇರಿಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ ತಮ್ಮ ಅರ್ಜಿಯ ಸ್ಥಿತಿಯ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ತಹಸೀಲ್ದಾರ್ ಸಿಬ್ಬಂದಿ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾರೆ. ಈ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರಿ ಕಚೇರಿಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು ಎದ್ದಿವೆ.

ವಿದ್ಯಾರ್ಥಿಯು, “ನನ್ನ ಭವಿಷ್ಯಕ್ಕೆ ಸಂಬಂಧಿಸಿದ ಪೊಲೀಸ್ ನೇಮಕಾತಿ ಅರ್ಜಿ ಸಲ್ಲಿಸಲು ಜಾತಿ ಪ್ರಮಾಣ ಪತ್ರ ಅಗತ್ಯವಾಗಿತ್ತು. ಹಲವು ದಿನಗಳಿಂದ ಕಚೇರಿಗೆ ಅಲೆದರೂ ಪ್ರಮಾಣ ಪತ್ರ ನೀಡಲಿಲ್ಲ. ಕೊನೆಗೆ ಪ್ರಶ್ನಿಸಿದ್ದಕ್ಕೆ ನನ್ನನ್ನೇ ಪೊಲೀಸ್ ವಶಕ್ಕೆ ಒಪ್ಪಿಸಿದರು,” ಎಂದು ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ತಹಸೀಲ್ದಾರ್ ಕಚೇರಿ ಅಥವಾ ಪೊಲೀಸ್ ಇಲಾಖೆಯಿಂದ ಇನ್ನೂ ಅಧಿಕೃತ ಸ್ಪಷ್ಟನೆ ಹೊರಬಂದಿಲ್ಲ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://www.instagram.com/reel/DaUtMNtzKx8/?igsh=MXB6cjZ0dnN6NGZy

Dailyhunt
Disclaimer: This content has not been generated, created or edited by Dailyhunt. Publisher: Kannada Dunia