Dailyhunt
BIG NEWS: ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ, ಹೊಸಬರಿಗೆ ಅವಕಾಶ

BIG NEWS: ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ, ಹೊಸಬರಿಗೆ ಅವಕಾಶ

ರಾಮನಗರ: ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಸರ್ಕಾರ ಅಧಿಕಾರಕ್ಕೆ ತರಬೇಕಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಜಿಲ್ಲೆ ಕೇತಗಾನಹಳ್ಳಿಯಲ್ಲಿ ಜೆಡಿಎಸ್ ಸಂಘಟನೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಹಲವು ರೀತಿಯ ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ.

ದೇಶದಲ್ಲಿರುವ ಚುನಾವಣೆ ಪದ್ಧತಿ ಮತ್ತು ಪಕ್ಷಗಳಿಗೆ ಇರುವ ಅವಕಾಶ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವೈ.ಎಸ್.ವಿ. ದತ್ತ ಮಾತನಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳ ನಡವಳಿಕೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದರು.

ಮುಂದಿನ ಚುನಾವಣೆಗೆ ಜೆಡಿಎಸ್ ಸಕಲ ರೀತಿಯಲ್ಲಿ ಸಜ್ಜಾಗಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸಲಾಗುವುದು. ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia