ಕನ್ನಡದುನಿಯಾ
ಕನ್ನಡದುನಿಯಾ

BIG NEWS: ಶಿಕ್ಷಕರ ವರ್ಗಾವಣೆ, ಟಿಇಟಿ ಪರೀಕ್ಷೆಗೆ ದಿನಾಂಕ ನಿಗದಿ - ಸಚಿವರಿಂದ ಸೂಚನೆ

BIG NEWS: ಶಿಕ್ಷಕರ ವರ್ಗಾವಣೆ, ಟಿಇಟಿ ಪರೀಕ್ಷೆಗೆ ದಿನಾಂಕ ನಿಗದಿ - ಸಚಿವರಿಂದ ಸೂಚನೆ
  • 1053d
  • 1.2k shares

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಣೆಯಾದ ಕೂಡಲೇ ಟಿಇಟಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸಚಿವರು, ಮುಂದಿನ ದಿನಗಳಲ್ಲಿ ಈ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಿರ್ವಹಣೆ ಮಾಡುವಲ್ಲಿ ಪೂರ್ವ ಸಿದ್ಧತಾ ಕ್ರಮಗಳನ್ನು ಪ್ರಾರಂಭಿಸಲು ಸೂಚನೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಅನುಮೋದನೆಗೊಂಡ ವರ್ಗಾವಣಾ ಕಾಯ್ದೆಯ ನಿಯಮಗಳನ್ನು ಶೀಘ್ರ ರೂಪಿಸಿ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ ನೀಡಿದ್ದಾರೆ.

No Internet connection

Link Copied