Dailyhunt
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್: ಆರು ಮಂದಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್: ಆರು ಮಂದಿಗೆ ಗಲ್ಲು ಶಿಕ್ಷೆ

ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಹತ್ಯೆ ಪ್ರಕರಣದಲ್ಲಿ ಆರು ಅಪರಾಧಿಗಳಿಗೆ ಗಂಗಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ರವಿ, ವಿಜಯ್, ಧನರಾಜ್, ಭರತ್, ಮೊಹಮ್ಮದ್ ರಫೀಕ್, ಗಂಗಾಧರ್ ಗಲ್ಲು ಶಿಕ್ಷೆಗೆ ಗುರಿಯಾದವರು.

ಈ ಆರು ಮಂದಿಗೆ ತಲಾ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಆದೇಶಿಸಿದ್ದಾರೆ.

2025 ಅ. 7ರಂದು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ವೆಂಕಟೇಶ ಕುರುಬರ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಗಂಗಾವತಿ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಮಾರ್ಚ್ 23 ರಂದು ಉಳಿದ ಆರು ಮಂದಿ ಆರೋಪಿಗಳು ನಿರ್ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿತ್ತು.

Dailyhunt
Disclaimer: This content has not been generated, created or edited by Dailyhunt. Publisher: Kannada Dunia